ನಾನೇನು ಪೆದ್ದನಾ? ಸಿದ್ದರಾಮಯ್ಯ ಜಾಣತನಕ್ಕೆ ಈ ‘ಮಾಧ್ಯಮ’ವೇ ಕಾರಣ

Published : Dec 27, 2018, 06:20 PM ISTUpdated : Dec 27, 2018, 06:28 PM IST
ನಾನೇನು ಪೆದ್ದನಾ? ಸಿದ್ದರಾಮಯ್ಯ ಜಾಣತನಕ್ಕೆ ಈ ‘ಮಾಧ್ಯಮ’ವೇ ಕಾರಣ

ಸಾರಾಂಶ

ಯಾರು ಎಷ್ಟೇ ಸಮರ್ಥನೆ  ಮಾಡಿಕೊಂಡರೂ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಿಎಂ ಕುಮಾರಸ್ವಾಮಿ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಲೇ ಇದೆ ಎಂಬುದಕ್ಕೆ ಮತ್ತೊಂದು ಸಾಕ್ಷ್ಯ ದೊರೆತಿದೆ.

ಬೆಂಗಳೂರು[ಡಿ.27] ದೋಸ್ತಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಈ ಸಾರಿ ಸರಕಾರದ ವಿಚಾರ ಹೊರತುಪಡಿಸಿ ಕನ್ನಡದ ಬಗ್ಗೆ ಮಾತನ್ನಾಡಿದ್ದಾರೆ.

ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಪರೋಕ್ಷ ಭಿನ್ನಾಭಿಪ್ರಾಯ ಇದೀಗ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಮತ್ತೊಮ್ಮೆ ಬಹಿರಂಗವಾಗಿದೆ.

ರಾಜ್ಯ ಸರ್ಕಾರವನ್ನು ಆಡಿಸುತ್ತಿರುವ ನಿಜವಾದ ರಿಂಗ್ ಮಾಸ್ಟರ್ ಇವರೆ!

ಕನ್ನಡ ಮಾಧ್ಯಮ ವಿಚಾರ ಇಬ್ಬರ ನಡುವಿನ ಜಂಗಿ ಕುಸ್ತಿಗೆ ವೇದಿಕೆ ಕಲ್ಪಿಸಿದೆ. ರಾಜ್ಯದಲ್ಲಿ‌ ಮುಂದಿನ ಶೈಕ್ಷಣಿಕ ವರ್ಷದಿಂದ ಒಂದು ಸಾವಿರ ಇಂಗ್ಲೀಷ್ ಮಾಧ್ಯಮ ಶಾಲೆಗಳನ್ನು‌ ಪ್ರಾರಂಭಿಸುವುದಾಗಿ‌ ಮುಖ್ಯಮಂತ್ರಿ‌ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ  ಅವರೊಡನೆ ಚರ್ಚೆ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಅಲ್ಲದೇ   ಕನ್ನಡ ಭಾಷೆ ಕಲಿಕೆ ಮತ್ತು ಕನ್ನಡ ಮಾಧ್ಯಮದ ಬಗ್ಗೆ ನಮಗೆ ಸ್ಪಷ್ಟತೆ ಇರಬೇಕು.‌ನಾನು ಹೈಸ್ಕೂಲ್ ವರೆಗೆ ಕನ್ನಡ ಮಾಧ್ಯಮದಲ್ಲಿಯೇ ಕಲಿತವನು. ನಾನೇನು ಪೆದ್ದನಾ? ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿ ಉಳಿಯಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!
ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!