
ಕಲಬುರಗಿ: ಮುಖ್ಯಮಂತ್ರಿಯಾಗಿ ತಮ್ಮ ಸಾಧನೆಯೇನೆಂದು ಪ್ರಶ್ನಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ವಿರುದ್ಧ ಸಿದ್ದರಾಮಯ್ಯ ತೀವ್ರ ಗರಂ ಆಗಿದ್ದಾರೆ.
ವಿಶ್ವನಾಥ್ ಹೊಟ್ಟೆಕಿಚ್ಚಿ ನಿಂದ ಈ ರೀತಿಯ ಹೇಳಿಕೆ ನೀಡಿದ್ದಾರೆ. ಈ ಕುರಿತು ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡುತ್ತೇನೆ ಎಂದು ಕಿಡಿಕಾರಿದ್ದಾರೆ. ವಿಶ್ವನಾಥ್ ಹೇಳಿಕೆಗೆ ಸಂಬಂಧಿಸಿ ಭಾನುವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇಂಥ ಹೇಳಿಕೆಗಳ ಕುರಿತು ಬಹಿರಂಗವಾಗಿ ಚರ್ಚೆ ಮಾಡುವುದು ಸರಿಯಲ್ಲ ಈ ಕುರಿತು ಸಮನ್ವಯ ಸಮಿತಿ ಸಭೆಯಲ್ಲೇ ಮಾತಾನಾಡುತ್ತೇನೆ ಎಂದರು.
ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಯಾಕೆ 78 ಸ್ಥಾನಕ್ಕೆ ಕುಸಿಯಿತು ಎಂಬ ವಿಶ್ವನಾಥ್ ಹೇಳಿಕೆಗೂ ಕಿಡಿಕಿಡಿಯಾದ ಮಾಜಿ ಮುಖ್ಯಮಂತ್ರಿ, ಅವರ ಮಾತಿಗೆ ಯಾರೂ ಜಾಸ್ತಿ ಕಿಮ್ಮತ್ತು ಕೊಡ ಬೇಡಿ ಎಂದರು. ಜತೆಗೆ, ಎಸ್. ಎಂ.ಕೃಷ್ಣ ಸರ್ಕಾರದಲ್ಲಿ ಇದೇ ವಿಶ್ವನಾಥ್ ಮಂತ್ರಿಯಾಗಿದ್ದರು. ನಂತರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ೬೫ ಸ್ಥಾನ ಬಂದಿತ್ತಲ್ವಾ ಎಂದು ಕಾಲೆಳೆದರು ಮಾಜಿ ಸಿಎಂ ಸಿದ್ದರಾಮಯ್ಯ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.