
ಬೆಂಗಳೂರು : ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಬಿಜೆಪಿ ಹಾಗೂ ರೈತರು ನಡೆಸುತ್ತಿರುವ ಹೋರಾಟದಿಂದ ತತ್ತರಿಸುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನಭಾಗ್ಯದ ಅಕ್ಕಿ ಪ್ರಮಾಣ ಹೆಚ್ಚಿಸುವಂತೆ ಹಾಗೂ ಪೆಟ್ರೋಲ್ ದರ ಕಡಿಮೆ ಮಾಡುವಂತೆ ಒತ್ತಾಯಿಸುವ ಪತ್ರದ ‘ಬಾಂಬ್ ಸಿಡಿಸುವ’ ಮೂಲಕ ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.
ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಅಕ್ಕಿ ಪ್ರಮಾಣವನ್ನು ಕಡಿಮೆ ಮಾಡುವ ಮತ್ತು ಸಾಲ ಮನ್ನಾ ಯೋಜನೆಗಾಗಿ ಪೆಟ್ರೋಲ್ ದರ ಹೆಚ್ಚಳ ಮಾಡಿ ಸಾರ್ವಜನಿಕರ ಮೇಲೆ ಹೊರೆ ಹಾಕಿರುವುದನ್ನು ವಿರೋಧಿಸಿ, ಈ ನಿರ್ಧಾರಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಸಿದ್ದರಾಮಯ್ಯ ಅವರು ಪತ್ರವೊಂದನ್ನು ಬರೆದಿದ್ದಾರೆ. ಜತೆಗೆ, ಬೆಂಗಳೂರಿನಲ್ಲಿ ಅಕ್ಕಿ ಕಡಿತ, ಪೆಟ್ರೋಲ್ ಬೆಲೆ ಏರಿಕೆಗೆ ಎರಡೂ ನಿರ್ಧಾರ ಮರುಪರಿಶೀಲಿಸುವಂತೆ ಸಿಎಂ ಎಚ್‌ಡಿಕೆಗೆ ಪತ್ರ ಬುಧವಾರ ನಡೆದ ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅಧಿಕಾರ ಸ್ವೀಕಾರ ಸಮಾರಂಭದಲ್ಲಿಯೂ ಸಹ ಬಹಿರಂಗವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಮಾಡುವ ಮುಖ್ಯಮಂತ್ರಿಗಳ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರದ ನಿರ್ಧಾರ ಸರಿಯಲ್ಲ, ರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳದ ವಿರುದ್ಧ ಕೇಂದ್ರದ ಬಿಜೆಪಿ ವಿರುದ್ಧ ತೀವ್ರ ಹೋರಾಟ ಮಾಡುತ್ತಿರುವ ಸಂದರ್ಭದಲ್ಲಿ ರಾಜ್ಯದಲ್ಲಿ ಇವುಗಳ ಬೆಲೆ ಹೆಚ್ಚಳ ಮಾಡಿರುವ ಕ್ರಮ ಸರಿಯಲ್ಲ ಎಂದು ನೇರವಾಗಿ ಹೇಳಿದ್ದಲ್ಲದೇ ಈ ಕುರಿತು ನಿರ್ಧಾರ ಪುನರ್ ಪರಿಶೀಲಿಸುವಂತೆ ಪತ್ರ ಬರೆದಿರುವುದಾಗಿ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.