ಕರಕುಶಲ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಯಿಂದ ಹೊರಗಿಡಲು ಜೇಟ್ಲಿಗೆ ಸಿಎಂ ಪತ್ರ

By Suvarna Web DeskFirst Published Oct 19, 2017, 6:25 PM IST
Highlights

ಗ್ರಾಮೀಣ ಕರಕುಶಲ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಯಿಂದ ಹೊರಗಿಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು: ಗ್ರಾಮೀಣ ಕರಕುಶಲ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಯಿಂದ ಹೊರಗಿಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಗೆ ಪತ್ರ ಬರೆದಿದ್ದಾರೆ.

ಗ್ರಾಮೀಣ ಕರಕುಶಲ ಉತ್ಪನ್ನಗಳ ಮೇಲೆ ಜಿಎಸ್ಟಿ ವಿಧಿಸಿರುವುದರಿಂದ ಕಲಾವಿದರು ಹಾಗೂ ಉತ್ಪನ್ನ ತಯಾರಿಸುವವರ ಜೀವನಾಧಾರದ ಮೇಲೆ ದುಷ್ಪರಿಣಾಮ ಬೀರಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕರಕುಶಲ ಉತ್ಪನ್ನಗಳ ಮೇಲೆ ಜಿಎಸ್ಟಿ ವಿಧಿಸಿರುವುದರಿಂದ ಕಲಾವಿದರು ಹಾಗೂ ಲಕ್ಷಾಂತರ ಕುಟುಂಬಗಳನ್ನು ಸಂಕಷ್ಟಕ್ಕೀಡುಮಾಡಿದೆ. ಇದರ ವಿರುದ್ಧ ರಂಗಕರ್ಮಿ ಹಾಗೂ ಸಾಮಾಜಿಕ ಕಾರ್ಯಕರ್ತ ಅವರು ಬೆಂಗಳೂರಿನಲ್ಲಿ ಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ, ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ತುರ್ತು ಕ್ರಮದ ಅಗತ್ಯವಿದೆ ಎಂದಿರುವ ಮುಖ್ಯಮಂತ್ರಿ,  ಮುಂದಿನ ಜಿಎಸ್ಟಿ ಸಭೆಯಲ್ಲಿ ಆದ್ಯತೆಯ ಮೇರೆಗೆ ಚರ್ಚಿಸಿ ಸಕಾರಾತ್ಮ ನಿರ್ಧಾರ ಕೈಗೊಳ್ಳುವ ಅಗತ್ಯವಿದೆಯೆಂದು ಮನವಿ ಮಾಡಿದ್ದಾರೆ.

click me!