ನವದೆಹಲಿ(ನ.01): ರಾಷ್ಟ್ರ ರಾಜಧಾನಿ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು, ಬ್ಯಾಗ್‌ನಲ್ಲಿ ಆರ್‌ಡಿಎಕ್ಸ್ ಇದೆ ಎಂದು ಅನುಮಾನ ವ್ಯಕ್ತಪಡಿಸಲಾಗಿದೆ.
"
ವಿಮಾನ ನಿಲ್ದಾಣದಲ್ಲಿ ಆರ್‌ಡಿಎಕ್ಸ್ ಪತ್ತೆಯಾಗಿರುವ ಹಿನ್ನಲೆಯಲ್ಲಿ, ನಗರದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಅನುಮಾನಾಸ್ಪದ ಬ್ಯಾಗ್ ಪತ್ತೆಯಾದ ಕೂಡಲೇ ವಿಮಾನ ನಿಲ್ದಾಣದ ಪ್ರಯಾಣಿಕರ ಚಲನವಲನಕ್ಕೆ ನಿರ್ಬಂಧ ಹೇರಲಾಗಿದೆ.
ಪುಲ್ವಾಮ ದಾಳಿ : ದಶಕದಲ್ಲೇ ಮೊದಲು ಇಂತಹ ಸ್ಫೋಟಕ ಬಳಕೆ
ಇಂದಿರಾ ಗಾಂಧಿ ವಿಮಾನ ನಿಲ್ದಾಣದ ಟರ್ಮಿನಲ್-3ರಲ್ಲಿ ಕಪ್ಪು ಬಣ್ಣದ ಅನುಮಾನಾಸ್ಪದ ಬ್ಯಾಗ್‌ವೊಂದು ಪತ್ತೆಯಾಗಿದ್ದು, ರಾತ್ರಿ1 ಗಂಟೆ ಸುಮಾರಿಗೆ ಸಿಐಎಸ್ಎಫ್ ಸಿಬ್ಬಂದಿ ಇದನ್ನು ಪತ್ತೆ ಮಾಡಿ ಸಂಭಾವ್ಯ ಅನಾಹುತವನ್ನು ತಪ್ಪಿಸಿದ್ದಾರೆ.
ಸದ್ಯ ಸ್ಫೋಟಕ ತಜ್ಞರು ಹಾಗೂ ಶ್ವಾನದಳಗಳು ಸ್ಥಳಕ್ಕೆ ಧಾವಿಸಿದ್ದು, ತೀವ್ರ ತಪಾಸಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಮಾನ ನಿಲ್ದಾಣದ ಸುತ್ತಮುತ್ತಲ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.