
ಹೂಸ್ಟನ್(ಸೆ.22): ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಹೂಸ್ಟನ್’ನಲ್ಲಿ ಬಿಡುವಿಲ್ಲದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಈಗಾಗಲೇ ಕಾಶ್ಮೀರಿ ಪಂಡಿತರ ನಿಯೋಗವನ್ನು ಭೇಟಿ ಮಾಡಿರುವ ಪ್ರಧಾನಿ, ಹೊಸ ಕಾಶ್ಮೀರ ನಿರ್ಮಾಣದ ಭರವಸೆ ನೀಡಿದ್ದಾರೆ.
ಇನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಪ್ರತ್ಯೇಕತೆಯ ಕೂಗು ಹೆಚ್ಚಾಗಿದ್ದು, ವಿಮೋಚನೆಗಾಗಿ ಸಿಂಧ್ ಹೋರಾಟಗಾರರು ಪ್ರಧಾನಿ ಮೋದಿ ಅವರಲ್ಲಿ ಸಹಾಯ ಬೇಡಿದ್ದಾರೆ.
ಸಿಂಧ್ ಪ್ರಾಂತ್ಯದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದ್ದು, ಸ್ವಾತಂತ್ರ್ಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿಗೆ ಸಿಂಧ್ ಹೋರಾಟಗಾರರು ಮೊರೆ ಇಟ್ಟಿದ್ದಾರೆ.
ಹೂಸ್ಟನ್’ನಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಸಿಂಧ್ ಹೋರಾಟಗಾರರು, ಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ಸಿಗಲು ನೆರವು ನೀಡಿದ ಹಾಗೆ ಸಿಂಧ್ ಪ್ರಾಂತ್ಯದ ಸ್ವಾತಂತ್ರ್ಯಕ್ಕೂ ನೆರವಾಗಬೇಕು ಎಂದು ಆಗ್ರಹಿಸಿದರು.
ಸ್ವಾತಂತ್ರ್ಯಕ್ಕಾಗಿ ಭಾರತದ ಪ್ರಧಾನಿ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಸಹಾಯ ಮಾಡುತ್ತಾರೆಂಬ ವಿಶ್ವಾಸವಿದೆ ಎಂದು ಸಿಂಧ್ ವಿಮೋಚನಾ ಹೋರಾಟಗಾರ ಝಫರ್ ಭರವಸೆ ವ್ಯಕ್ತಪಡಿಸಿದ್ದಾರೆ.
ಭಾರತ 1971 ರಲ್ಲಿ ಪಾಕಿಸ್ತಾನದಿಂದ ಸ್ವಾತಂತ್ರ್ಯ ಗಳಿಸಿಕೊಳ್ಳುವುದಕ್ಕೆ ಬಾಂಗ್ಲಾದೇಶಕ್ಕೆ ಸಹಾಯ ಮಾಡಿತ್ತು. ಈಗ ಸಿಂಧ್ ಸಮುದಾಯಕ್ಕೆ ಪಾಕಿಸ್ತಾನದಿಂದ ವಿಮೋಚನೆಗೊಳ್ಳುವುದಕ್ಕೆ ಸಹಾಯ ಮಾಡಬೇಕೆಂದು ಜಫರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.