
ನವದೆಹಲಿ [ಜು.19] : ಬಹುಕೋಟಿ ವಂಚನೆ ಆರೋಪ ಹೊತ್ತು ತಲೆಮರೆಸಿಕೊಂಡಿರುವ ಐಎಂಎ ಸಂಸ್ಥೆ ಮಾಲಿಕ ಮಹಮ್ಮದ್ ಮನ್ಸೂರ್ ಖಾನ್ ಬಂಧನವಾಗಿದೆ. ದಿಲ್ಲಿಯಲ್ಲಿ ತಡರಾತ್ರಿ ಎಸ್ ಐ ಟಿ ಅಧಿಕಾರಿಗಳು ಮನ್ಸೂರ್ ಖಾನ್ ಬಂಧಿಸಿದ್ದಾರೆ.
"
ತಲೆಮರೆಸಿಕೊಂಡು ದುಬೈ ತೆರಳಿದ್ದ ಮನ್ಸೂರ್ ದಿಲ್ಲಿಯಲ್ಲಿ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಕಳೆದ ನಾಲ್ಕು ದಿನಗಳ ಹಿಂದಷ್ಟೇ 24 ಗಂಟೆಯಲ್ಲಿ ಭಾರತಕ್ಕೆ ಬರುವುದಾಗಿ ಹೇಳಿದ್ದ ಮನ್ಸೂರ್ ಖಾನ್ ಇದೀಗ ಪೊಲೀಸರ ವಶದಲ್ಲಿದ್ದಾನೆ.
ಸಾವಿರಾರು ಜನರಿಗೆ ಕೊಟ್ಯಂತರ ರು. ವಂಚನೆ ಮಾಡಿ ವಿದೇಶಕ್ಕೆ ಪರಾರಿಯಾಗಿದ್ದ. ಈತನ ಕಂಪನಿಯಲ್ಲಿ ಹಣ ಹೂಡಿದ್ದ ಹಲವು ಕುಟುಂಬಗಳು ಬೀದಿಗೆ ಬಿದ್ದಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.