
ಬೆಂಗಳೂರು(ಸೆ.18): ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತಂಡ ರೌಡಿ ಮುಲಾಮ ಸೇರಿ ಹಲವು ಪಾತಕಿಗಳ ವಿಚಾರಣೆ ನಡೆಸಲಾಗಿದೆ.
ಇನ್ನು ಕೆಲವರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ.ಗೌರಿ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಿದ್ದ ಎಲ್ಲ ರೌಡಿಗಳನ್ನು ವಿಚಾರಣೆ ನಡೆಸಲಾಗಿದೆ. ಅಲ್ಲದೆ ಪ್ರಕರಣದ ತನಿಖೆಯನ್ನು ಎಸ್ಐಟಿ ತಂಡ ಮತ್ತಷ್ಟು ಚುರುಕುಗೊಳಿಸಿದೆ.
ಗೌರಿ ಹತ್ಯೆ ಶಾರ್ಪ್ ಶೂಟರ್ಗಳಿಂದಲೇ ಆಗಿದೆ ಎಂದು ಶಂಕೆ ವ್ಯಕ್ತಪಡಿಸಿ, ಶಾರ್ಪ್ ಶೂಟರ್ ಬಗ್ಗೆ ಮಾಹಿತಿಯನ್ನು ಎಸ್ಐಟಿ ಕಲೆ ಹಾಕುತ್ತಿದೆ. ಮುಂಬೈ, ಆಂಧ್ರ, ಕರ್ನಾಟಕದಲ್ಲಿರುವ ಶಾರ್ಪ್ ಶೂಟರ್ಗಳ ಬಗ್ಗೆ ಮಾಹಿತಿ ಪಡೆಯುತ್ತಿದೆ. ಈಗಾಗಲೇ ಹಲವು ಶಾರ್ಪ್ಶೂಟರ್ಗಳನ್ನು ವಿಚಾರಣೆ ನಡೆಸಿದೆ. ಈ ಹಿಂದೆ ಎಸ್ಐಟಿ ತಂಡ ವಿಜಯಪುರದಲ್ಲೂ ಕಂಟ್ರಿ ಪಿಸ್ತೂಲ್ ಸಂಬಂಧಿಸಿದಂತೆ ಹಲವರ ವಿಚಾರಣೆ ನಡೆಸಿತ್ತು. ಜತೆಗೆ ಬೆಂಗಳೂರು, ಮೈಸೂರು, ಧಾರವಾಡ, ಬೆಳಗಾವಿ ಜೈಲುಗಳಿಗೆ ಭೇಟಿ ಪ್ರಮುಖ ಖೈದಿಗಳನ್ನು ವಿಚಾರಣೆ ನಡೆಸಿದ್ದಾರೆ. ಮಾಹಿತಿ ಆಧರಿಸಿ ತಮಿಳುನಾಡಿನ ರಾಮೇಶ್ವರಂಗೆ ತೆರಳಿದ ಎಸ್ಐಟಿ ತಂಡ ನಾನಾ ಮಾಹಿತಿ ಕಲೆಹಾಕುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.