ಸೀತೆಯನ್ನು ಟೆಸ್ಟ್‌ಟ್ಯೂಬ್ ಬೇಬಿ ಎಂದ ಯುಪಿ ಡಿಸಿಎಂ..!

Published : Jun 01, 2018, 05:40 PM IST
ಸೀತೆಯನ್ನು ಟೆಸ್ಟ್‌ಟ್ಯೂಬ್  ಬೇಬಿ ಎಂದ ಯುಪಿ ಡಿಸಿಎಂ..!

ಸಾರಾಂಶ

ಉತ್ತರಪ್ರದೇಶ ಡಿಸಿಎಂ ದಿನೇಶ್ ಶರ್ಮ ಅವರ ಹೇಳಿಕೆ ಇದೀಗ ವಿವಾದ ಸೃಷ್ಟಿಸಿದೆ. ಸೀತಾಮಾತೆ ಪ್ರಣಾಳ ಶಿಶುವಾಗಿದ್ದಳು ಎಂದು ಶರ್ಮ ಹೇಳಿಕೆ ನೀಡಿ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ.

ಲಕ್ನೋ(ಜೂ.1): ಉತ್ತರಪ್ರದೇಶ ಡಿಸಿಎಂ ದಿನೇಶ್ ಶರ್ಮ ಅವರ ಹೇಳಿಕೆ ಇದೀಗ ವಿವಾದ ಸೃಷ್ಟಿಸಿದೆ. ಸೀತಾಮಾತೆ ಪ್ರಣಾಳ ಶಿಶುವಾಗಿದ್ದಳು ಎಂದು ಶರ್ಮ ಹೇಳಿಕೆ ನೀಡಿ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ.

ಸೀತಾಮಾತೆ ಟೆಸ್ಟ್‌ಟ್ಯೂಬ್ ಬೇಬಿಯಾಗಿದ್ದಳು ಎಂದು ಶರ್ಮ ಹೇಳುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ. ಸೀತೆ ಎಂದಾಕ್ಷಣ ಆಕೆ ಜನಕ ರಾಜ ಭೂಮಿ ಉಳುತ್ತಿದ್ದಾಗ ನೇಗಿಲಿಗೆ ಪೆಟ್ಟಿಗೆಯಲ್ಲಿ ಸಿಕ್ಕಿದ ಮಗು ಎಂಬುದು ಸಾಮಾನ್ಯವಾಗಿ ಕೇಳಿಬರುವ ವಿವರಣೆ. ಆದರೆ ದಿನೇಶ್ ಶರ್ಮ ರಾಮಾಯಣ ಕಾಲದಲ್ಲೇ ಪ್ರಣಾಳ ಶಿಶು ಪರಿಕಲ್ಪನೆ ಇತ್ತು ಎಂದು ಹೇಳುವ ಮೂಲಕ ಕಿಡಿ ಹೊತ್ತಿಸಿದ್ದಾರೆ.

ಇನ್ನು ದಿನೇಶ್ ಶರ್ಮ ಅವರ ಹೇಳಿಕೆಗೆ ಬಿಜೆಪಿಯಲ್ಲೇ ಭಾರೀ ವಿರೋಧ ವ್ಯಕ್ತವಾಗಿದ್ದು, ಇದು ಅವರ ವ್ಯಯಕ್ತಿಕ ಅಭಿಪ್ರಾಯ ಎಂದು ಉತ್ತರಪ್ರದೇಶ ಬಿಜೆಪಿ ವಕ್ತಾರ ರಾಕೇಶ್ ತ್ರಿಪಾಠಿ ಹೇಳಿದ್ದಾರೆ. ದಿನೇಶ್ ಅವರ ಹೇಳಿಕೆಯಿಂದ ಪಕ್ಷ ಅಂತರ ಕಾಯ್ದುಕೊಂಡಿದ್ದು, ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೃತ್ತಿಪರತೆ ಅಂತ್ಯಸಂಸ್ಕಾರ, ಪ್ರಶ್ನೆ ಕೇಳಿದ ಪತ್ರಕರ್ತೆಗೆ ಕಣ್ಣು ಹೊಡೆದ ಪಾಕಿಸ್ತಾನ ಸೇನಾ ಲೆ.ಜನರಲ್
ರೀಲ್ಸ್‌ ನೋಡಿ ನೋಡಿ, ಗಂಡ ಮಕ್ಕಳ ಬಿಟ್ಟು ಸೋಶಿಯಲ್ ಮೀಡಿಯಾ ಗೆಳೆಯನಿಗಾಗಿ ಬಸ್ ಹತ್ತಿದ ಮಹಿಳೆ