
ದಿಲ್ಲಿ : 3 ವರ್ಷದ ಬಾಲಕನಾಗಿದ್ದಾಗ ದಿಲ್ಲಿಯಿಂದ ಕಾಣೆಯಾಗಿದ್ದ ಬಾಲಕನೋರ್ವನನ್ನು 6 ವರ್ಷದ ಬಳಿಕ ಪತ್ತೆ ಮಾಡುವಲ್ಲಿ ಪಂಜಾಬ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಅತ್ಯಧಿಕ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳ ತಂಡವು ವಿವಿಧ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಬಾಲಕನನ್ನು ಪತ್ತೆ ಮಾಡಲಾಗಿದೆ ಎಂದು ಕ್ರೈಂ ಬ್ರಾಂಚ್ ಜಂಟಿ ಆಯುಕ್ತರಾದ ಅಲೋಕ್ ಕುಮಾರ್ ಹೇಳಿದ್ದಾರೆ.
ಮನೆಯಿಂದ ಕಾಣೆಯಾದಾಗ ಈ ಬಾಲಕ ಅನೇಕ ಪ್ರದೇಶಗಳಲ್ಲಿ ಸುತ್ತಿದ್ದ. ಸದ್ಯ ಬಾಲಕನನ್ನು ಪೊಲೀಸರು ದಂಪತಿ ಬಳಿಯಲ್ಲಿ ಪತ್ತೆ ಮಾಡಿದ್ದಾರೆ. ಸಂಜಯ್ ಹಾಗೂ ಲಾಕಿ ಎನ್ನುವ ದಂಪತಿ ಬಳಿ ಬಿಹಾರದಲ್ಲಿ ಪತ್ತೆ ಮಾಡಲಾಗಿದೆ. ಇವರೇ ಬಾಲಕನನ್ನು ತಮ್ಮ ಜೊತೆಯಲ್ಲಿ ಕರೆದೊಯ್ದಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬಿಹಾರದಲ್ಲಿ ಈತ ಒಂದು ತಿಂಗಳು ವಾಸವಾಗಿದ್ದು, ಆತನನ್ನು ತಮ್ಮ ಜೊತೆಗೆ ಕರೆದೊಯ್ದ ದಂಪತಿ ಕೂಡ ಆತನ ಪೋಷಕರ ಪತ್ತೆಗೆ ಹಲವು ಬಾರಿ ಪ್ರಯತ್ನಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.