ರಾಮನಗರ ಉಪಚುನಾವಣೆ: ಬಿಜೆಪಿಯಿಂದ ಮಾಜಿ‌ ಸಿಎಂ ಪುತ್ರಿ ಕಣಕ್ಕೆ..?

By Web DeskFirst Published Oct 5, 2018, 3:27 PM IST
Highlights

ಸಿಎಂ ಕುಮಾರಸ್ವಾಮಿ ಅವರಿಂದ ತೆರವಾದ ರಾಮನಗರ ಉಪಚುನಾವಣೆ ಈಗ ಜೆಡಿಎಸ್ ಹಾಗೂ ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿ ತೊಡಗಿವೆ.

ಬೆಂಗಳೂರು, ಅ 05:. ರಾಮನಗರ ಹಾಗೂ ಜಮಖಂಡಿ ವಿಧಾನಸಭಾ ಉಪಚುನಾವಣೆಗೆ ದಿನಾಂಕ ಘೋಷಣೆಯಾಗುವ ಮುನ್ನವೇ ರಾಜ್ಯ ರಾಜಕಾರಣ ರಂಗೇರಿದೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯೊಂದಿಗೆ ಅಖಾಡಕ್ಕೆ ಇಳಿದರೆ, ಬಿಜೆಪಿ ಏಕಾಂಗಿ ಹೋರಾಟಕ್ಕೆ ಸಿದ್ಧವಾಗಿದೆ. ಸಿಎಂ ಕುಮಾರಸ್ವಾಮಿ ಅವರಿಂದ ತೆರವಾದ ರಾಮನಗರ ಉಪಚುನಾವಣೆ ಈಗ ಜೆಡಿಎಸ್ ಹಾಗೂ ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿ ತೊಡಗಿವೆ.

ಕ್ಷೇತ್ರಗಳಿಗೆ ಉಪ ಚುನಾವಣೆ : ಕಾಂಗ್ರೆಸ್ - ಜೆಡಿಎಸ್ ದೋಸ್ತಿ..?

ಮೂಲಗಳ ಪ್ರಕಾರಣ ಕುಮಾರಸ್ವಾಮಿ ಅವರ ಕರ್ಮ ಭೂಮಿ ರಾಮನಗರಕ್ಕೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಲೆಕ್ಕಚಾರಗಳು ನಡೆದಿವೆ.

ಇನ್ನು ಬಿಜೆಪಿಯಿಂದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಪುತ್ರಿ ಶಾಂಭವಿ ಅವರನ್ನು ಕಣಕ್ಕಿಳಿಸಲು ಮಾಸ್ಟರ್ ಪ್ಲಾನ್ ಮಾಡಿದೆ ಮತ್ತೊಂದೆಡೆ ಎಸ್.ಎಂ.ಕೃಷ್ಣ ಪುತ್ರಿ ಶಾಂಭವಿ ಅವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎನ್ನುವ ಮಾತುಕತೆಗಳು ಸಹ ನಡೆದಿವೆ.

click me!