
ಹುಬ್ಬಳ್ಳಿ: (ಸೆ.14): ಪನಾಮಾ ಪೇಪರ್ಸ್ ಹಗರಣ ಇಡೀ ಜಗತ್ತನ್ನೇ ನಡುಗಿಸಿದ ಪ್ರಕರಣ. ಈ ಹಗರಣದಲ್ಲಿ ಪಾಕಿಸ್ತಾನದ ಅಂದಿನ ಪ್ರಧಾನಿ ನವಾಜ್ ಷರೀಫ್ ಜೈಲು ಸೇರಬೇಕಾಗಿ ಬಂತು. ಇಂತಹ ಪ್ರಕರಣದಲ್ಲಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ಅಳಿಯ ಮತ್ತು ಅಳಿಯನ ಮಗಳು ಭಾಗಿಯಾಗಿದ್ದಾರೆ ಎಂಬ ಗಂಭೀರ ಆರೋಪವನ್ನು ಸಾಮಾಜಿಕ ಹೋರಾಟಗಾರ ಎಸ್.ಆರ್. ಹಿರೇಮಠ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು (ಶುಕ್ರವಾರ) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್.ಎಂ.ಕೃಷ್ಣ ಅವರು ವಿದೇಶಾಂಗ ಸಚಿವರಾಗಿದ್ದಾಗ ಅಳಿಯ ಉಮೇಶ್ ಹಿಂಗೂರಾಣಿ ಮತ್ತು ಮಗಳು ಶಾಂಭವಿ ಪ್ರಭಾವ ಬಳಸಿ ಹಲವಾರು ಕಂಪೆನಿಗಳನ್ನು ತೆರೆದಿದ್ದಾರೆ. ಆ ಕಂಪೆನಿಗಳನ್ನ ತೆರೆಯಲು ಹಣ ಎಲ್ಲಿಂದ ಬಂತು ಎಂದು ಯಾರಿಗೂ ಗೊತ್ತಿಲ್ಲ ಎಂದು ಗಂಭೀರ ಆರೋಪ ಮಾಡಿದರು.
ಬೆಂಗಳೂರು ಸೇರಿದಂತೆ, ಲಂಡನ್‌ನಲ್ಲೂ ಕಂಪೆನಿಗಳನ್ನು ತೆರೆದಿರುವ ಇವರಿಗೆ ಹಣದ ಮೂಲ ಯಾವುದು ಎಂದು ಎಲ್ಲೂ ಬಹಿರಂಗಪಡಿಸಿಲ್ಲ. ಅಲ್ಲದೆ, ವಿದೇಶದಲ್ಲಿ ಮಾಡಿರುವ ನೂರಾರು ಕೋಟಿ ಹಣದ ಬಗ್ಗೆ ಮಾಹಿತಿ ಬಹಿರಂಗಪಡಿಸಿಲ್ಲ. ಈ ಹಗರಣದ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಗೆ ಆಗ್ರಹಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.