
ಬೆಂಗಳೂರು(ಜ.28): ಕಾಂಗ್ರೆಸ್'ಗೆ ಗುಡ್'ಬಾಯ್ ಹೇಳಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬಗ್ಗೆ ಮತ್ತೊಂದು ಗುಸುಗುಸು ಹರಿದಾಡುತ್ತಿದೆ. ಪ್ರಸ್ತುತ ರಾಜಕೀಯ ನಾಯಕರು ತಮ್ಮನ್ನು ಮೂಲೆಗುಂಪು ಮಾಡುತ್ತಿದ್ದಾರೆ ಎನ್ನುವುದು ಎಲ್ಲಡೆ ಹರಿದಾಡುತ್ತಿರುವ ವಿಷಯ.
ಇನ್ನೊಂದು ಮೂಲಗಳ ಪ್ರಕಾರ ಎಸ್'ಎಂಕೆ ಫೆ.6 ರಂದು ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದು, ಆ ದಿನವೇ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗುವ ಕಾರ್ಯಕ್ರಮಗಳಿವೆ. ಪ್ರಧಾನಿಯವರನ್ನು ಭೇಟಿಯಾಗುವ ಕಾರಣದಿಂದ ಬಿಜೆಪಿ'ಗೆ ಸೇರಬಹುದೆಂಬ ಸುದ್ದಿ ಕೇಳಿಬರುತ್ತಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.
ಜ.29 ರಂದು 11 ಗಂಟೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದು, ರಾಜೀನಾಮೆಗೆ ವಾಸ್ತವ ಕಾರಣವನ್ನು ತಿಳಿಸುವ ಸಾಧ್ಯತೆಯಿದೆ. 1999 ರಿಂದ 2004 ರವರೆಗೆ ಕಾಂಗ್ರೆಸ್'ನಿಂದ ಮುಖ್ಯಮಂತ್ರಿಯಾಗಿದ್ದ ಅವರು ತದ ನಂತರ ಮಹಾರಾಷ್ಟ್ರದ ರಾಜ್ಯಪಾಲ ಹಾಗೂ ಯುಪಿಎ ಆಡಳಿತದಲ್ಲಿ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.