ಸಿಎಂ ವಿರುದ್ಧ ಅಸಮಾಧಾನ : ಕಾಂಗ್ರೆಸ್'ಗೆ ಎಸ್'ಎಂ ಕೃಷ್ಣ ರಾಜೀನಾಮೆ

Published : Jan 28, 2017, 12:46 AM ISTUpdated : Apr 11, 2018, 12:51 PM IST
ಸಿಎಂ ವಿರುದ್ಧ ಅಸಮಾಧಾನ : ಕಾಂಗ್ರೆಸ್'ಗೆ ಎಸ್'ಎಂ ಕೃಷ್ಣ ರಾಜೀನಾಮೆ

ಸಾರಾಂಶ

ರಾಜ್ಯ ನಾಯಕರ ನಡವಳಿಕೆಯಿಂದ ಅಸಮಾಧಾನಗೊಂಡು ರಾಜೀನಾಮೆ ಸಲ್ಲಿಸಿದ್ದಾರೆ.

ಬೆಂಗಳೂರು(ಜ.28): ಕಾಂಗ್ರೆಸ್'ನ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ, ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಕಾಂಗ್ರೆಸ್'ಗೆ ರಾಜೀನಾಮೆ ನೀಡಿದ್ದಾರೆ. ರಾಜ್ಯ ನಾಯಕರ ನಡವಳಿಕೆಯಿಂದ ಅಸಮಾಧಾನಗೊಂಡು ರಾಜೀನಾಮೆ ಸಲ್ಲಿಸಿದ್ದಾರೆ.  ಸಿಎಂ ಸಿದ್ದರಾಮಯ್ಯ ಹಾಗೂ ಮತ್ತಿತ್ತರ ಮುಖಂಡರ ನಡವಳಿಗೆಯ ವಿರುದ್ಧ ಎಸ್'ಎಂ'ಕೆ ಅಸಮಧಾನಗೊಂಡಿದ್ದರು. ಇಂದು ಬೆಳಿಗ್ಗೆ 11 ಗಂಟೆಗೆ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ. 

2 ದಿಗಗಳ ಹಿಂದಷ್ಟೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದ ಅವರು ರಾಜ್ಯ ಕಾಂಗ್ರೆಸ್​ನಲ್ಲಾಗುತ್ತಿರುವ ಬೆಳವಣಿಗೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಸಂಬಂಧ ನಾಳೆ ಬೆಳಿಗ್ಗೆ 11 ಗಂಟೆಗೆ ತುರ್ತು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಕರ್ನಾಟಕದಲ್ಲಿ 1999 ರಿಂದ 2004 ರವರೆಗೆ ಕಾಂಗ್ರೆಸ್'ನಿಂದ ಮುಖ್ಯಮಂತ್ರಿಯಾಗಿದ್ದ ಅವರು ತದ ನಂತರ ಮಹಾರಾಷ್ಟ್ರದ ರಾಜ್ಯಪಾಲ ಹಾಗೂ ಯುಪಿಎ ಆಡಳಿತದಲ್ಲಿ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಕ್ಷರ ಲೋಕದ ಅವಧಾನಿ: ಕನ್ನಡ ಅಧ್ಯಾಪಕ ಜಿ.ಬಿ.ಹರೀಶರ ಪತ್ರಿಕಾ ಪ್ರತಿಭೆ
ನಿಮ್ಮ ಆರೋಗ್ಯಕ್ಕೆ ನಿಜವಾದದ್ದೇ ಅರ್ಹತೆ: ನಕಲಿ ಉತ್ಪನ್ನಗಳ ವಿರುದ್ಧ ಹರ್ಬಾಲೈಫ್ ಇಂಡಿಯಾದ ಉಪಕ್ರಮ