ಹೋಟೆಲ್, ಪಬ್ ಬಾರ್ ಗಳಲ್ಲಿ ಕಡ್ಡಾಯ ಸ್ಮೋಕಿಂಗ್ ಝೋನ್

Published : Aug 30, 2018, 07:26 AM ISTUpdated : Sep 09, 2018, 09:58 PM IST
ಹೋಟೆಲ್, ಪಬ್ ಬಾರ್ ಗಳಲ್ಲಿ ಕಡ್ಡಾಯ ಸ್ಮೋಕಿಂಗ್ ಝೋನ್

ಸಾರಾಂಶ

ಬಾರ್ ಮತ್ತು  ಹೋಟೆಲ್ ಗಳಲ್ಲಿ ಈ ವ್ಯವಸ್ಥೆ ಕಡ್ಡಾಯವಾಗಿ ಇರಬೇಕು ಎಂದು ಬಿಬಿಎಂಪಿ ಸುತ್ತೋಲೆಯನ್ನು ಹೊರಡಿಸಿದೆ. ಆರೋಗ್ಯದ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ. 

ಬೆಂಗಳೂರು :  ಹೋಟೆಲ್, ಕ್ಲಬ್, ಪಬ್, ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಸ್ಮೋಕಿಂಗ್ ರೆನ್‌ಗಳ ನಿರ್ಮಾಣವನ್ನು ಕಡ್ಡಾಯಗೊಳಿಸಿ ಬಿಬಿಎಂಪಿ ಬುಧವಾರ ಸುತ್ತೋಲೆ ಹೊರಡಿಸಿದೆ. ಧೂಮಪಾನ ಮಾಡುವವರಿಂದ ಸುತ್ತಮುತ್ತಲ ಇತರೆ ಜನರಿಗೆ ಪರೋಕ್ಷವಾಗಿ ಆಗುತ್ತಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ತಂಬಾಕು ನಿಯಂತ್ರಣ ಉನ್ನತ ಮಟ್ಟದ ಸಮಿತಿ ಸದಸ್ಯ ಡಾ.ವಿಶಾಲ್ ರಾವ್ ಅವರು ಮಂಗಳವಾರ ಪಾಲಿಕೆ ಸಭೆಯಲ್ಲಿ ಪ್ರಾತ್ಯಕ್ಷಿಕೆ ನೀಡಿದ್ದರು. ಈ ವೇಳೆ ಬಿಬಿಎಂಪಿ ಸದಸ್ಯರು ನಗರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಆಗ್ರಹಿಸಿದ್ದರು. 

ಪರೋಕ್ಷ ಧೂಮಪಾನದಿಂದಾಗಿ ಮಹಿಳೆಯರು, ಮಕ್ಕಳು ಹಾಗೂ ಹೋಟೆಲ್ ಸಿಬ್ಬಂದಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದ್ದರಿಂದ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವನ್ನು ಸಂಪೂರ್ಣ ನಿಷೇಧ ಮಾಡಿರುವ ರೀತಿಯಲ್ಲೇ, ಹೋಟೆಲ್, ಬಾರ್, ಪಬ್ ಮತ್ತು ರೆಸ್ಟೊರೆಂಟ್‌ಗಳಲ್ಲೂ ಪರೋಕ್ಷ ಧೂಮಪಾನಕ್ಕೆ ಅವಕಾಶ ಕಲ್ಪಿಸುತ್ತಿರುವ ಧೂಮಪಾನ ಪ್ರದೇಶಗಳನ್ನು ಸಂಪೂರ್ಣ ನಿಷೇಧಿಸಬೇಕು ಎಂದು  ಒತ್ತಾಯಿಸಿದ್ದರು. 

ಅದಕ್ಕೆ ಮೇಯರ್ ಆರ್.ಸಂಪತ್ ರಾಜ್, ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದರು. ಅದರಂತೆ ಬುಧವಾರ ಪಾಲಿಕೆ ಸುತ್ತೋಲೆ  ಹೊರಡಿಸಿದ್ದು, ಸಿಗರೆಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ- 2003 ರಲ್ಲಿ (ಕೋಟ್ಪಾ) 30 ಕ್ಕಿಂತ ಹೆಚ್ಚು ಆಸನ ವ್ಯವಸ್ಥೆಯಿರುವ ಬಾರ್, ರೆಸ್ಟೋರೆಂಟ್, ಹೋಟೆಲ್, ಪಬ್ ಹಾಗೂ ಕ್ಲಬ್‌ಗಳಲ್ಲಿ ಪ್ರತ್ಯೇಕ ಧೂಮಪಾನ  ಪ್ರದೇಶವನ್ನು ಸ್ಥಾಪಿಸಬೇಕು ಎಂದು ಸುತ್ತೋಲೆ ಹೊರಡಿಸಿದೆ. ಪ್ರತ್ಯೇಕ ಧೂಮಪಾನ ಪ್ರದೇಶವನ್ನು ಸ್ಥಾಪಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು . ಜತೆಗೆ ಉದ್ದಿಮೆ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಿಮ್ಮ ಹೊಸ ಮನೆಗೆ ಪೇಂಟ್ ಮಾಡುವಾಗ ಈ 7 ತಪ್ಪು ಮಾಡಬೇಡಿ!
ಕಟಿಹಾರ್ ಜಂಕ್ಷನ್‌ನಲ್ಲಿ ಮಹಿಳೆಯ ಭಯಾನಕ ಅನುಭವ: 30-40 ಪುರುಷರು ನುಗ್ಗಲು ಯತ್ನ, ಶೌಚಾಲಯದಲ್ಲಿ ಸಿಲುಕಿದ ಮಹಿಳೆ!