'ಮಾಜಿ ಪ್ರಧಾನಿಗೆ ಪ್ರಿಯಾಂಕಾ ಅವಮಾನ': ಸ್ಮೃತಿ ಇರಾನಿ ಆರೋಪಕ್ಕೆ ಸಾಕ್ಷಿಯಾಯ್ತು ವಿಡಿಯೋ

Published : Mar 21, 2019, 12:42 PM IST
'ಮಾಜಿ ಪ್ರಧಾನಿಗೆ ಪ್ರಿಯಾಂಕಾ ಅವಮಾನ': ಸ್ಮೃತಿ ಇರಾನಿ ಆರೋಪಕ್ಕೆ ಸಾಕ್ಷಿಯಾಯ್ತು ವಿಡಿಯೋ

ಸಾರಾಂಶ

ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಗೆ ಪ್ರಿಯಾಂಕಾರಿಂದ ಅವಮಾನ: ಸ್ಮೃತಿ ಇರಾನಿ ಆರೋಪ| ವೈರಲ್ ಆಯ್ತು ವಿಡಿಯೋ

ನವದೆಹಲಿ[ಮಾ.21]: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರನ್ನು ಅಮಾನಿಸಿದ್ದಾರೆಂದು ಆರೋಪಿಸಿದ್ದಾರೆ. 

ಸ್ಮೃತಿ ಇರಾನಿ ತಮ್ಮ ಟ್ವಿಟರ್ ಖಾತೆಯಲ್ಲಿ ವಿಡಿಯೋ ಒಂದನ್ನು ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ಪ್ರಿಯಾಂಕಾ ಗಾಂಧಿ ತಮ್ಮ ಕೊರಳಿನಲ್ಲಿದ್ದ ಹೂವಿನ ಹಾರವನ್ನು ತೆಗೆಯುತ್ತಾರೆ. ಬಳಿಕ ಅದೇ ಹಾರವನ್ನು ಮಾಜಿ ದಿವಂಗತ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಪ್ರತಿಮೆಗೆ ಹಾಕುತ್ತಾರೆ. ಇದನ್ನು ಖಂಡಿಸಿರುವ ಇರಾನಿ ಈ ಮೂಲಕ ಪ್ರಿಯಾಂಕಾ ಗಾಂಧಿ ಮಾಜಿ ಪ್ರಧಾನಿಗೆ ಅವಮಾನ ಮಾಡಿದ್ದಾರೆ. ಇದು ಕಾಂಗ್ರೆಸ್ ನ ನೈಜ ಸಂಸ್ಕೃತಿ ಎಂದು ವ್ಯಂಗ್ಯ ಮಾಡಿದ್ದಾರೆ.

ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಯಾತ್ರೆ ಹಾಗೂ ಸಮಾವೇಶಗಳಲ್ಲಿ ಭಾಗಿಯಗುತ್ತಿರುವ ಪ್ರಿಯಾಂಕಾ ಗಾಂಧಿ ಪಕ್ಷದ ಕಾರ್ಯಕರ್ತರು ಹಾಗೂ ಜನ ಸಾಮಾನ್ಯರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡೆವಿಲ್ ಇನ್ ಟ್ರಬಲ್: ನಟ ದರ್ಶನ್‌ನಿಂದ ಒಂದು ಗನ್ ಕಿತ್ತುಕೊಂಡರೂ ಮತ್ತೊಂದು .22mm ರೈಫಲ್ ಮರೆತ ಪೊಲೀಸರು
Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!