
ಬೆಂಗಳೂರು[ಮಾ. 05] ರಾಹುಲ್ ಗಾಂಧಿ ಅವರ ಮೇಲೆ ವಾಗ್ದಾಳಿ ಮಾಡುತ್ತ ಚುನಾವಣಾ ಪ್ರಚಾರದ ವೇಳೆ ಮೋದಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಬಗ್ಗೆ ಉಲ್ಲೇಖ ಮಾಡಿದ್ದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ರಮ್ಯಾ ಬರೆದುಕೊಂಡಿದ್ದರು.
ಕರುಣೆ ಎನ್ನುವುದನ್ನು ರಾಜೀವ್ ಗಾಂಧಿಯವರಿಂದ ಕಲಿಯಬೇಕು ಎಂದ ರಮ್ಯಾಗೆ ನೆಟ್ಟಿಗರು ಮತ್ತೆ ಕ್ಲಾಸ್ ತೆಗೆದುಕೊಂಡಿದ್ದಾರೆ. 'ನಾನು ಎಂಟು ವರ್ಷವಳಾಗಿದ್ದಾಗ ಬಸ್ ನಲ್ಲಿ ಪ್ರಯಾಣಿಸುತ್ತಿದ್ದೆ, ಆಗ ರಾಜೀವ್ ಗಾಂಧಿ ನಿಧನರಾದ ಸುದ್ದಿಬಂತು. ಆಗ ಜನರು ಬಹಳಷ್ಟು ಕಣ್ಣೀರಿಟ್ಟಿದ್ದರು. ಗಂಡಸರು, ಹೆಂಗಸರು, ಮಕ್ಕಳು ಎಲ್ಲರೂ ರಾಜೀವ್ ಗಾಂಧಿ ಸಾವಿನ ಬಗ್ಗೆ ಕಣ್ಣೀರಾಗಿದ್ದರು ಎಂದು ರಮ್ಯಾ ಸರಣಿ ಟ್ವೀಟ್ ಮಾಡಿದ್ದರು.
ಇದಕ್ಕೆ ಕ್ಲಾಸ್ ತೆಗೆದುಕೊಂಡಿರುವ ನಾಗರಿಕರು, ಮೊದಲು ನೀವು ಮತದಾನ ಮಾಡುವುದನ್ನು ಕಲಿಯಿರಿ, ಮೋದಿ ಅವರಿಂದ ನೀವು ಕಲಿತುಕೊಳ್ಳಿ, ಯಾವ ಪಕ್ಷದವರು ಯಾವ ಹೇಳಿಕೆ ನೀಡಿದ್ದಾರೆ? ನಿಮಗೆ ಗೊತ್ತಿಲ್ಲವೇ ಎಂದು ಕಾಲೆಳೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.