
ಬೆಂಗಳೂರು : ಎಂಎಲ್ ಎ ಕ್ಯಾಂಡಿಡೇಟ್ ಎಂದು ಜನರಿಗೆ ಮೋಸ ಮಾಡುತ್ತಿದ್ದ ಎಲ್ ಸೋಮಣ್ಣ ಎಂಬಾತನನ್ನು ಕಳೆದೆರಡು ದಿನಗಳ ಹಿಂದೆ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದರು.
ಇದೀಗ ಈತನ ವಿರುದ್ಧ ಇದೀಗ ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಂಡವರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಚಾಲುಕ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಎಲ್ ಸೋಮಣ್ಣನ ವಿರುದ್ದ ಈಗಾಗಲೇ 25ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ.
ನಿವೇಶನ,ಸರ್ಕಾರಿ ಕೆಲಸ ಕೊಡಿಸುವುದಾಗಿ ಈತ ಕೋಟ್ಯಾಂತರ ರೂಪಾಯಿ ಮೋಸ ಮಾಡಿದ್ದಾನೆ. ಬಿಎಸ್ ಆರ್ ಕಾಂಗ್ರೆಸ್ ನಲ್ಲಿ ಎಂಎಲ್ ಎ ಕ್ಯಾಂಡಿಡೇಟ್ ಎಂದು ಜನರಿಗೆ ಮಂಕುಭೂದಿ ಎರಚಿದ್ದ ಎನ್ನುವ ವಿಚಾರವು ಇದೀಗ ಬೆಳಕಿಗೆ ಬಂದಿದೆ.
ಇತ್ತೀಚೆಗೆ ನಂಜನಗೂಡಿನ ಜೆಡಿಎಸ್ ಎಂಎಲ್ ಎ ಕ್ಯಾಂಡಿಡೇಟ್ ಎಂದು ಹೇಳಿಕೊಂಡಿದ್ದ. ಎಂಎಲ್ ಎ ಎಂದು ಚಿನ್ನದ ವ್ಯಾಪಾರಿಗಳಿಂದ ಸಾಮೂಹಿಕ ಮದುವೆಯ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಚಿನ್ನಾಭರಣ ಲೂಟಿ ಮಾಡಿದ್ದ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.