
ಪಟನಾ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲೇ ಭಾರೀ ಬಹುಮತದೊಂದಿಗೆ ಮರಳಿ ಅಧಿಕಾರ ಪಡೆಯಲು ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದೆ.
ಆದರೆ, ಮೋದಿ ಅವರನ್ನು ಮುಂದಿನ ಅವಧಿಗೂ ಪ್ರಧಾನಿಯಾಗಿಸಬೇಕೆಂಬ ಬಿಜೆಪಿ ಯೋಜನೆಗೆ ಎನ್‌ಡಿಎ ಮೈತ್ರಿಕೂಟದ ಕೆಲವು ಪಕ್ಷಗಳೇ ಅಪಸ್ವರ ಎತ್ತಿವೆ ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ.
ಈ ಬಗ್ಗೆ ಶುಕ್ರವಾರ ಮಾತನಾಡಿದ ಕೇಂದ್ರ ಸಚಿವ ಹಾಗೂ ರಾಷ್ಟ್ರೀಯ ಲೋಕ ಸಮತಾ ಪಕ್ಷ(ಆರ್‌ಎಲ್‌ಎಸ್‌ಪಿ)ದ ನಾಯಕ ಉಪೇಂದ್ರ ಕುಶ್ವಾಹಾ, ‘ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯಾಗಿ ನೋಡಲು ಎನ್‌ಡಿಎ ಮೈತ್ರಿಕೂಟದ ಕೆಲವು ಮಂದಿಗೆ ಇಷ್ಟವಿಲ್ಲ.
ಆದರೆ ಅವರಾರೆಂದು ನಾನು ಹೇಳಲ್ಲ’ ಎಂದು ಆರೋಪಿಸಿದ್ದಾರೆ. ಅಲ್ಲದೆ, ಇದನ್ನು ನಾನು ಸುಖಾ-ಸುಮ್ಮನೇ ಹೇಳುತ್ತಿಲ್ಲ. ಆದಾಗ್ಯೂ, ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ಹೆಚ್ಚು ಮತಗಳ ಕ್ರೋಡೀಕರಣಕ್ಕೆ ನೆರವಾಗುತ್ತೇನೆ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.