
ಯಾದಗಿರಿ: ರಾಜ್ಯದಲ್ಲಿರುವ ಮೈತ್ರಿ ಸರ್ಕಾರ ಶೀಘ್ರದಲ್ಲಿಯೇ ಪತನವಾಗಲಿದೆ. ಜ್ಯೋತಿಷಿಗಳು ನುಡಿದ ಭವಿಷ್ಯದಂತೆ ಬಿ.ಎಸ್.ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಮುಖಂಡ ಮಾಲಿಕಯ್ಯ ಗುತ್ತೇದಾರ ತಿಳಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಅಪವಿತ್ರ ಮೈತ್ರಿ ಸರ್ಕಾರದಲ್ಲಿ ನಾಯಕರ ಒಳ ಜಗಳದಿಂದ ಶೀಘ್ರದಲ್ಲಿ ಸರ್ಕಾರ ಪತನವಾಗಲಿದೆ. ಸರ್ಕಾರದ ಗೊಂದಲದಿಂದಾಗಿ ಅಸಮಾಧಾನಗೊಂಡಿರುವ ಕಾಂಗ್ರೆಸ್‌ನ 20ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಬಿಜೆಪಿಯ 104 ಶಾಸಕರಲ್ಲಿ ಯಾರೊಬ್ಬರೂ ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎಂದು ತಿಳಿಸಿದರು.
ಖರ್ಗೆಗೆ ಪುತ್ರ ವ್ಯಾಮೋಹ:
ನಮ್ಮ ಭಾಗದ ಪ್ರಭಾವಿ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕುಟುಂಬ ರಾಜಕಾರಣ ಮಾಡುತ್ತಿದ್ದು, ಪುತ್ರ ವ್ಯಾಮೋಹದಿಂದ ಅವರು ಹೈದ್ರಾಬಾದ್ ಕರ್ನಾಟಕದ ನಾಯಕರನ್ನು ಮೂಲೆಗುಂಪು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಬಾಬುರಾವ ಚಿಂಚನಸೂರ್, ಡಾ.ಮಾಲಕರೆಡ್ಡಿ, ದಿವಂಗತ ಖಮರುಲ್ ಇಸ್ಲಾಂ ಅವರಿಗೆ ಅನ್ಯಾಯ ಮಾಡಿದ್ದಾರೆ. ಪ್ರಸ್ತುತ ಧರ್ಮಸಿಂಗ್ ಪುತ್ರ ಡಾ.ಅಜಯಸಿಂಗ್ ಅವರನ್ನೂ ಮೂಲೆಗುಂಪು ಮಾಡಿದ್ದಾರೆ. ಇಲ್ಲಿ ಯಾರಿಗೂ ಬೆಳೆಯಲು ಅವಕಾಶ ನೀಡುತ್ತಿಲ್ಲ. ಹೀಗಾಗಿ ಹೈದ್ರಾಬಾದ್ ಕರ್ನಾಟಕ ಭಾಗದ ಅನೇಕ ನಾಯಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.