
ನವದೆಹಲಿ(ಜು. 22): ಪ್ರಜಾಪ್ರಭುತ್ವದ ಮೌಲ್ಯಗಳೊಡನೆ ರಾಜಿ ಮಾಡಿಕೊಳ್ಳುವ ಅಪಾಯಕಾರಿ ಆಡಳಿತದಿಂದ ದೇಶವನ್ನು ರಕ್ಷಿಸುವ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ಮೇಲಿದೆ ಎಂದು ಪಕ್ಷದ ಮಾಜಿ ಅಧ್ಯಕ್ಷೆ, ಹಿರಿಯ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.
ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಹೊಸದಾಗಿ ರಚನೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಸೋನಿಯಾ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು.
ದೇಶದ ಬಡಜನತೆ ಭಯ ಹಾಗೂ ಹತಾಶೆಯ ಜೀವನ ನಡೆಸುವ ವಾತಾವರಣ ನಿರ್ಮಾಣವಾಗಿದೆ. ಈ ಕುರಿತಂತೆ ಕಾಂಗ್ರೆಸ್ ಎಚ್ಚರ ವಹಿಸಬೇಕಿದೆ ಎಂದ ಸೋನಿಯಾ, ಅಧಿಕಾರಕ್ಕಾಗಿ ಸಮಾಜದಲ್ಲಿ ದ್ವೇಷ ಬಿತ್ತುತ್ತಿರುವ ಬಿಜೆಪಿಯನ್ನು ಸೋಲಿಸುವ ಜವಾಬ್ದಾರಿಯನ್ನು ಪಕ್ಷ ಹೊರಬೇಕು ಎಂದು ಹೇಳಿದರು,
ಪ್ರಧಾನಿ ನರೇಂದ್ರ ಮೋದಿ ಅವರ ವಾಕ್ಚಾತುರ್ಯವು ಕೇಂದ್ರ ಸರ್ಕಾರದ ಪತನ ಪ್ರಾರಂಭವಾಗಿರುವುದನ್ನು ಸೂಚಿಸಿದೆ. ಅಲ್ಲದೆ ಅದು ತನ್ನ ಹತಾಶ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತಿದೆ. ನಾವು ಒಗ್ಗಟ್ಟಾಗಿ ಕೆಲಸ ಮಾಡಲು ಬದ್ದವಾಗಿದ್ದೇವೆ. ಪ್ರಜಾಪ್ರಭುತ್ವವನ್ನು ರಕ್ಷಿಸುವ ಕೆಲಸಕ್ಕೆ ನಾವು ರಾಹುಲ್ ಅವರೊಂದಿಗೆ ಕೈಜೋಡಿಸುತ್ತೇವೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.