
ನವದೆಹಲಿ (ಜು.13): ರಾಹುಲ್ ಗಾಂಧಿ- ಚೀನಾ ರಾಯಬಾರಿ ಭೇಟಿಯಿಂದಾಗಿ ಭಾರೀ ಮುಜುಗರಕ್ಕೆ ಒಳಗಾಗಿದ್ದ ಕಾಂಗ್ರೆಸ್ ಪಕ್ಷ ಸಂವಹನ ಕಾರ್ಯತಂತ್ರ ಪಡೆಯನ್ನು ರಚಿಸಿದೆ.
ಈ ತಂಡದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪಿ.ಚಿದಂಬರಂ, ಮಲ್ಲಿಕಾರ್ಜುನ ಖರ್ಗೆ, ಮಣಿಶಂಕರ್ ಅಯ್ಯರ್, ಆನಂದ್ ಶರ್ಮಾ, ಜೈರಾಮ್ ರಮೇಶ್, ಸುಷ್ಮಿತಾ ದೇವ್ ಮತ್ತು ಜ್ಯೋತಿರಾದಿತ್ಯ ಸಿಂಧ್ಯ ಇರಲಿದ್ದಾರೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಇವರೆಲ್ಲಾ ಬಹಳ ಆಪ್ತರಾಗಿದ್ದಾರೆ. ಸೋನಿಯಾ ಗಾಂಧಿ ನೇತೃತ್ವದಲ್ಲಿ 10 ಜನರ ತಂಡ ಪ್ರತಿನಿತ್ಯ ಭೇಟಿಯಾಗಿ ಪ್ರಮುಖ ರಾಷ್ಟ್ರೀಯ ವಿಚಾರಗಳ ಬಗ್ಗೆ ಪಕ್ಷದ ನೀತಿಯ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.