
ನವದೆಹಲಿ (ಮೇ.21): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯತಿಥಿಯ ಪ್ರಯುಕ್ತ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಹಿಳಾ ಮೀಸಲಾತಿಗಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ಮುಂಬರುವ ಸಂಸತ್ತು ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕೃತವಾಗುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಮಹಿಳಾ ಕಾಂಗ್ರೆಸ್ ಈ ಅಭಿಯಾನವನ್ನು ಆರಂಭಿಸಿದೆ. ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸೀಟುಗಳು ಮೀಸಲಾಗಿಡಬೇಕು ಎಂಬುವುದು ಸಹಿ ಸಂಗ್ರಹದ ಉದ್ದೇಶವಾಗಿದೆ.
ಈ ಅಭಿಯಾನಕ್ಕೆ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ, ಪುತ್ರಿ ಪ್ರಿಯಾಂಕಾ ಗಾಂಧಿ ಹಾಗೂ ಅಳಿಯ ರಾಬರ್ಟ್ ವಾದ್ರಾ ಕೂಡಾ ಸಹಿ ಹಾಕಿದ್ದಾರೆ.
ರಾಜೀವ್ ಕಂಡ ಮಹಿಳಾ ಸಬಲೀಕರಣದ ಕನಸು ಮುಂಬರುವ ಮುಂಗಾರು ಅಧಿವೇಶನದಲ್ಲಿ ನನಸಾಗಬೇಕು. ಅದಕ್ಕಾಗಿ ಮನೆ-ಮನೆಗೆ ಹೋಗಿ ಸಹಿ ಸಂಗ್ರಹ ಮಾಡಲಾಗುವುದು, ಹಾಗೂ ಮನವಿಯೊಂದಿಗೆ ಅದನ್ನು ಆಗಸ್ಟ್ 20ರಂದು ರಾಷ್ಟ್ರಪತಿಗಳಿಗೆ ಸಲ್ಲಿಸಲಾಗುವುದೆಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶೋಭಾ ಓಝಾ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.