'ಆನಂದ್ ಸಿಂಗ್ ಬಳಿಕ 12 ಶಾಸಕರು ರಾಜೀನಾಮೆ'

By Web DeskFirst Published Jul 1, 2019, 11:39 AM IST
Highlights

ಈಗಾಗಲೇ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇನ್ನು 12 ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ನಾಯಕರೋರ್ವರು ಹೇಳಿದ್ದಾರೆ. 

ಬೆಂಗಳೂರು [ಜು.1] : ರಾಜ್ಯದಲ್ಲಿ ಅಸ್ತಿತ್ವದಲ್ಲಿ ಇರುವ ಮೈತ್ರಿ ಸರ್ಕಾರ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ. ಒಬ್ಬೊಬ್ಬರಾಗಿಯೇ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. 

ಸುವರ್ಣ ನ್ಯೂಸ್.ಕಾಂಗೆ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್, ಈಗಾಗಲೇ ವಿಜಯನಗರ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಇನ್ನೂ 10 ರಿಂದ 12 ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದರು. 

ಮೈತ್ರಿ ಸರ್ಕಾರ ಬಗ್ಗೆ ಅಲ್ಲಿನ ಶಾಸಕರು ಬೇಸರಗೊಂಡಿದ್ದಾರೆ.  ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಈ ಸರ್ಕಾರದ ಉಳಿಯುವುದಿಲ್ಲ ಎಂದು ನಾನು ಆಗಲೇ ಹೇಳಿದ್ದೆ. ಲೋಕಸಭಾ ಫಲಿತಾಂಶದ ಬಳಿಕ ನೈತಿಕತೆ ಇದ್ದಿದ್ದರೆ ಸಿಎಂ  ರಾಜೀನಾಮೆ ನೀಡಬೇಕಿತ್ತು ಎಂದರು.

ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಸರ್ಕಾರ ಮುಂದುವರೆಯುವುದು ಕಾಂಗ್ರೆಸ್ - ಜೆಡಿಎಸ್ ಶಾಸಕರಿಗೆ ಇಷ್ಟವಿಲ್ಲ. ಕಾಂಗ್ರೆಸ್ ಮಾತ್ರವಲ್ಲ ಜೆಡಿಎಸ್ ಶಾಸಕರು ಸಾಕಷ್ಟು ಅತೃಪ್ತಿ ಹೊಂದಿದ್ದಾರೆ.  ಬಿಜೆಪಿ 105 ಸ್ಥಾನಗಳನ್ನು ಹೊಂದಿದೆ. ಮ್ಯಾಜಿಕ್ ನಂಬರ್ 113 ಆಗಬೇಕಿದೆ. ರಾಜ್ಯದ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಪತನವಾದರೆ ಬಿಜೆಪಿ ಸರ್ಕಾರ ರಚಿಸಿ ಆಡಳಿತ ನಡೆಸಲಿದೆ. ನಮ್ಮ ವರಿಷ್ಠರ ಸಲಹೆ ಪಡೆದು ಸರ್ಕಾರ ರಚನೆ ಬಗ್ಗೆ ತೀರ್ಮಾನ ತೆಗೆದು ಕೊಳ್ಳಲಾಗುವುದು ಎಂದು ಜಗದೀಶ್ ಶೆಟ್ಟರ್ ಹೇಳಿದರು.

ರಾಜೀನಾಮೆ ಪರ್ವ: ನಂಬರ್ ಗೇಮ್ ಹೀಗಿದೆ...

"

 

click me!