‘ಮೈತ್ರಿ ಸರ್ಕಾರ ಶೀಘ್ರವೇ ಪತನ, ಬಿಜೆಪಿ ಸರ್ಕಾರ ರಚನೆ’

By Web DeskFirst Published Jun 30, 2019, 10:29 AM IST
Highlights

ಶೀಘ್ರವೇ ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಭವಿಷ್ಯ ನುಡಿಯಲಾಗಿದೆ. 

ಬೆಂಗಳೂರು [ಜೂ.30]:  ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ನೇತೃತ್ವದ ಮೈತ್ರಿ ಸರ್ಕಾರ ಶೀಘ್ರವೇ ಪತನವಾಗಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಶೀಘ್ರದಲ್ಲಿಯೇ ರಚನೆಯಾಗಲಿದೆ. ಆಗ ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಸರ್ಕಾರ ಇರಲಿದೆ ಎಂದು ಕೇಂದ್ರ ರಾಸಾಯನಿಕ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಭವಿಷ್ಯ ನುಡಿದಿದ್ದಾರೆ.

ನಗರದ ಬಂಟರ ಸಂಘದಲ್ಲಿ ಶನಿವಾರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗಳಿಸಿದರೂ ಕೆಲವೇ ಕೆಲವು ಸ್ಥಾನಗಳ ಕೊರತೆಯಿಂದ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ. ಆದರೆ ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು ಎಂಬುದು ಬಹುತೇಕರ ಒತ್ತಾಸೆಯಾಗಿದೆ. ಕಾರ್ಯಕರ್ತರ ಬಹುದಿನಗಳ ಕನಸು ಶೀಘ್ರದಲ್ಲಿಯೇ ನನಸಾಗಲಿದೆ. ಆಗ ರಾಜ್ಯದ ಅಭಿವೃದ್ಧಿಯು ಅತ್ಯಂತ ವೇಗದಲ್ಲಿ ಸಾಗಲಿದೆ ಎಂದು ಅಭಿಪ್ರಾಯಪಟ್ಟರು.

ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಮಾತನಾಡಿ, ಅಭಿವೃದ್ಧಿಗೆ ನಾವು ಬೇಕು, ಮತ ಹಾಕಲು ಬಿಜೆಪಿ ಬೇಕು ಎಂದು ಮಿತ್ರ ಪಕ್ಷದ ಮುಖಂಡರು ಹೇಳುತ್ತಿದ್ದಾರೆ. ಆದರೆ, ಕೇಂದ್ರ ಸಚಿವರಾಗಿದ್ದ ನಿತಿನ್‌ ಗಡ್ಕರಿ ಅವರು ಹಾಸನಕ್ಕೆ ರಸ್ತೆ ನಿರ್ಮಾಣಕ್ಕಾಗಿ ಕೋಟ್ಯಂತರ ರು. ನೀಡಿದ್ದಾರೆ. ಹಾಗಾದರೆ ಆ ರಸ್ತೆಯಲ್ಲಿ ಸಚಿವ ಎಚ್‌.ಡಿ.ರೇವಣ್ಣ ಏಕೆ ಓಡಾಡುತ್ತಾರೆ? ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿವಂಗತ ಮಾಜಿ ಪ್ರಧಾನಿ ಎ.ಬಿ.ವಾಜಪೇಯಿ, ಅನಂತಕುಮಾರ್‌ ಅವರು ಬೆಂಗಳೂರು ಮಹಾನಗರಕ್ಕೆ ಮೆಟ್ರೋ ರೈಲು ಜಾರಿ ಮಾಡಿದರು. ಆ ರೈಲಿನ ಉದ್ಘಾಟನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಕೆ ಹೋದರು ಎಂದು ಮಿತ್ರ ಪಕ್ಷ ನಾಯಕರ ವಿರುದ್ಧ ಟೀಕಾಪ್ರಹಾರ ನಡೆಸಿದರು.

click me!