ಇಎಸ್ ಐ ಆಸ್ಪತ್ರೆಗಳಲ್ಲಿ ಇನ್ನು ಲ್ಯಾಬ್ ಮತ್ತು ಡಯಾಲಿಸಿಸ್ ಘಟಕ

Published : Jul 21, 2018, 09:54 AM IST
ಇಎಸ್ ಐ ಆಸ್ಪತ್ರೆಗಳಲ್ಲಿ ಇನ್ನು ಲ್ಯಾಬ್ ಮತ್ತು ಡಯಾಲಿಸಿಸ್ ಘಟಕ

ಸಾರಾಂಶ

ಕಾರ್ಮಿಕರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಅವರಿಗೆ ಹೆಚ್ಚಿನ ಚಿಕಿತ್ಸಾ ಸೌಲಭ್ಯ ನೀಡುವ ಉದ್ದೇಶದಿಂದ ರಾಜ್ಯದ ಎಲ್ಲ ಇಎಸ್‌ಐ ಚಿಕಿತ್ಸಾಲಯ ಹಾಗೂ ಆಸ್ಪತ್ರೆಗಳಲ್ಲಿ ಅತ್ಯುತ್ತಮವಾದ ಪ್ರಯೋಗಾಲಯ, ಡಯಾಲಿಸಿಸ್ ಮತ್ತು ಆಯುಷ್ ಘಟಕಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. 

ಬೆಂಗಳೂರು : ಕಾರ್ಮಿಕರಿಗೆ ಹೆಚ್ಚಿನ ಚಿಕಿತ್ಸಾ ಸೌಲಭ್ಯ ನೀಡುವ ಉದ್ದೇಶದಿಂದ ರಾಜ್ಯದ ಎಲ್ಲ ಇಎಸ್‌ಐ ಚಿಕಿತ್ಸಾಲಯ ಹಾಗೂ ಆಸ್ಪತ್ರೆಗಳಲ್ಲಿ ಅತ್ಯುತ್ತಮವಾದ ಪ್ರಯೋಗಾಲಯ, ಡಯಾಲಿಸಿಸ್ ಮತ್ತು ಆಯುಷ್ ಘಟಕಗಳನ್ನು ಶೀಘ್ರದಲ್ಲಿ ಆರಂಭಿಸಲಾಗುವುದು ಎಂದು ಕಾರ್ಮಿಕ ಸಚಿವ ವೆಂಕಟರಮಣಪ್ಪ ತಿಳಿಸಿದರು. 

ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ 112 ಇಎಸ್‌ಐ ಚಿಕಿತ್ಸಾಲಯ, ಏಳು ಆಸ್ಪತ್ರೆಗಳಿದ್ದು, ಈ ಸೇವೆಗಳನ್ನು ಹೊರಗುತ್ತಿಗೆ ಮೇಲೆ ನೀಡುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಲಾಗಿದೆ. ಕೇಂದ್ರ ಸದ್ಯದಲ್ಲಿ ಅನುಮತಿ ನೀಡಲಿದೆ. ಅನುಮತಿ ದೊರೆತ ನಂತರ ಈ ಘಟಕಗಳು ಕಾರ್ಯಾರಂಭ ಮಾಡಲಿವೆ ಎಂದರು. ಇಎಸ್‌ಐ ಆಸ್ಪತ್ರೆಗಳಲ್ಲಿ ಕಾರ್ಮಿಕರಿಗೆ ದೊರೆಯುತ್ತಿರುವ ಸೇವೆಯ ಬಗ್ಗೆ ಖುದ್ದಾಗಿ ತಿಳಿದುಕೊಳ್ಳಲು ಹಠಾತ್ ಭೇಟಿ ಮಾಡಿದ್ದೇನೆ. 

ಇತ್ತೀಚೆಗೆ ಇಂದಿರಾ ನಗರದ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವೈದ್ಯರ ನಿರ್ಲಕ್ಷ್ಯ ಕಂಡು ಬಂದಿತು. ನರ್ಸ್‌ಗಳು ಸಹ ಸರಿಯಾಗಿ ಕೆಲಸ ಮಾಡುತ್ತಿರಲಿಲ್ಲ. ಕೂಡಲೇ ನಿರ್ದೇಶಕರನ್ನು ಕರೆದು ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಸದರಿ ಆಸ್ಪತ್ರೆಯಲ್ಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದ ಕಾರಣ ಬೇರೆ ಆಸ್ಪತ್ರೆಗಳಿಗೆ ಚಿಕಿತ್ಸೆ ನೀಡುವಂತೆ ಸೂಚಿಸಿದೆ ಎಂದು ತಿಳಿಸಿದರು.

ಹಂತ ಹಂತವಾಗಿ ಕಾರ್ಮಿಕರಿಗೆ ವಸತಿ: ರಾಜ್ಯದ ಎಲ್ಲ ಕಾರ್ಮಿಕರಿಗೆ ಹಂತ ಹಂತವಾಗಿ ವಸತಿ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ. ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಮನೆ ನೀಡಲಾ ಗುವುದು. ಕಾರ್ಮಿಕರ ವಸತಿಗಾಗಿ ನೀಡುತ್ತಿದ್ದ ಅನುದಾನ ವನ್ನು 2 ಲಕ್ಷ ರು.ಗಳಿಂದ ಐದು ಲಕ್ಷ ರು.ಗಳಿಗೆ ಹೆಚ್ಚಿಸಲಾಗಿದೆ ಎಂದರು. ಕಾರ್ಮಿಕರ ಆಯುಕ್ತರ ಕಚೇರಿಗೆ ಹಠಾತ್ ಆಗಿ ಭೇಟಿ ನೀಡಿದ ಸಂದರ್ಭದಲ್ಲಿ ಯಾರಿಗೂ ತಿಳಿಸದೇ ಕಚೇರಿಯಿಂದ ಹೊರಗಡೆ ಇದ್ದ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವ್ಯವಹಾರದ ಬಗ್ಗೆ ಮಾತನಾಡುತ್ತಿದ್ದಾಗಲೇ ಉದ್ಯಮಿಗೆ ಹಠಾತ್ ಹೃದಯಾಘಾತ: ಸಿಪಿಆರ್ ಮಾಡಿ ಜೀವ ಉಳಿಸಿದ ಯುವಕ
ಮಾಟ ಮಂತ್ರ ಪರಿಹಾರದ ನಾಟಕ: ಮಲ್ಲೇಶ್ವರಂನಲ್ಲಿ ಚಿನ್ನಾಭರಣ ದೋಚಿದ ನಕಲಿ ಸ್ವಾಮಿಗಳು!