
ಬೆಂಗಳೂರು: ಕಾಂಗ್ರೆಸ್‌ನ ಇತ್ತೀಚಿನ ಬೆಳವಣಿಗೆಗಳು ಹಾಗೂ ಒಳಜಗಳ ನೋಡಿದರೆ ಶೀಘ್ರದಲ್ಲಿ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಭವಿಷ್ಯ ನುಡಿದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪವಿತ್ರ ಮೈತ್ರಿಯ ಭಾರಕ್ಕೆ ಮೈತ್ರಿ ಸರ್ಕಾರ ಕುಸಿಯಲಿದೆ ಎಂಬುದನ್ನು ಸರ್ಕಾರದ ಆರಂಭದ ದಿನದಿಂದ ಹೇಳುತ್ತಿದ್ದೇವೆ.
ಇದೀಗ ಬೆಳಗಾವಿಯ ಪಿಎಲ್‌ಡಿ ಬ್ಯಾಂಕ್ ಚುನಾವಣೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿ ವಿದೇಶ ಪ್ರವಾಸ ಕೈಗೊಂಡಿರುವುದನ್ನು ಗಮನಿಸಿದರೆ ಸರ್ಕಾರ ಹೆಚ್ಚುದಿನ ಉಳಿಯುವುದಿಲ್ಲ ಎಂದಿದ್ದಾರೆ.
ಮೈತ್ರಿ ಸರ್ಕಾರದ ಪತನಕ್ಕೆ ಬಿಜೆಪಿ ಕಾರಣವಾಗುವುದಿಲ್ಲ. ಕಾಂಗ್ರೆಸ್‌ನ ಮುಖಂಡರ ಒಳಜಗಳಗಳಿಂದ ಸರ್ಕಾರ ಪತನವಾಗಲಿದೆ. ಆದರೆ, ಮತ್ತೆ ಬಿಜೆಪಿ ಸರ್ಕಾರ ರಚನೆ ಮಾಡಬೇಕೆಂಬ ಹುರುಪಿನಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.