
ಬೆಂಗಳೂರು : ಬಿಜೆಪಿಯ ಕೊನೆಯ ಹಾಗೂ ಪ್ರಮುಖ ಅಸ್ತ್ರವಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 27ರಿಂದ ರಾಜ್ಯದಲ್ಲಿ ಸತತವಾಗಿ ಚುನಾವಣಾ ಪ್ರಚಾರ ನಡೆಸುವ ಸಾಧ್ಯತೆಯಿದೆ.
ಈ ಸಂಬಂಧ ಪಕ್ಷದ ನಾಯಕರು ಮೋದಿ ಅವರ ಕಾರ್ಯಕ್ರಮದ ರೂಪರೇಷೆ ಸಿದ್ಧಪಡಿಸುತ್ತಿದ್ದು, ಇನ್ನೆರಡು ದಿನಗಳಲ್ಲಿ ಅಂತಿಮಗೊಳ್ಳಲಿದೆ ಎಂದತು ಉನ್ನತ ಮೂಲಗಳು ತಿಳಿಸಿವೆ.
ರಾಜ್ಯದ ಎಲ್ಲ ವಿಭಾಗಗಳಲ್ಲೂ ಮೋದಿ ಅವರು ಪ್ರಚಾರ ನಡೆಸಲಿದ್ದಾರೆ. ಎರಡು ಅಥವಾ ಮೂರು ಜಿಲ್ಲೆಗಳನ್ನು ಒಳಗೊಂಡಂತೆ ಒಂದು ಕಡೆ ಮೋದಿ ಅವರ ಸಮಾವೇಶ ಹಮ್ಮಿಕೊಳ್ಳುವ ಬಗ್ಗೆ ಚಿಂತನೆ ನಡೆದಿದೆ. ಒಂದು ದಿನಕ್ಕೆ ಕನಿಷ್ಠ ಎರಡು ಕಡೆ ಸಮಾವೇಶಗಳನ್ನು ಆಯೋಜಿಸುವ ಸಾಧ್ಯತೆಯಿದೆ. ಮೋದಿ ಅವರ ವರ್ಚಸ್ಸನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ.
ಇದಕ್ಕೆ ಪೂರಕ ಎಂಬಂತೆ ಮೋದಿ ಅವರು ಕೂಡ ಕರ್ನಾಟಕದ ಚುನಾವಣಾ ಪ್ರಚಾರಕ್ಕೆ ಹೆಚ್ಚು ದಿನ ಮೀಸಲಿಡಲು ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಸೂಚನೆ ಮೇರೆಗೆ ಎಲ್ಲೆಲ್ಲಿ ಸಮಾವೇಶ ನಡೆಸಬೇಕು ಎಂಬುದನ್ನು ಅಖೈರುಗೊಳಿಸಲಾಗುವುದು ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.