
ಬಳ್ಳಾರಿ/ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರದಂತೆ ನೋಡಿಕೊಂಡಿದ್ದೇವೆ. ಈ ಮೂಲಕ ಬಿಜೆಪಿಯ ದಕ್ಷಿಣ ಭಾರತದ ಹೆಬ್ಬಾಗಿಲನ್ನು ಮುಚ್ಚಲಾಗಿದೆ. ಇನ್ನು 2019ಕ್ಕೆ ನರೇಂದ್ರ ಮೋದಿ ಅವರನ್ನು ಕೆಳಗಿಳಿಸಲೇಬೇಕು ಎಂದು ರಾಷ್ಟ್ರಮಟ್ಟದಲ್ಲಿ ಜಾತ್ಯತೀತ ಪಕ್ಷಗಳು ಒಟ್ಟಾಗಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಉಪಚುನಾವಣೆಯ ಫಲಿತಾಂಶ 2019ರ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಆಗಲಿದೆ ಎಂಬುದನ್ನು ನಾನು ಅಲ್ಲಗಳೆಯುವುದಿಲ್ಲ. 1996ರಲ್ಲಿ ಪ್ರಾದೇಶಿಕ ಪಕ್ಷ ಒಗ್ಗೂಡಿಸುವುದರಲ್ಲಿ ಚಂದ್ರಬಾಬು ನಾಯ್ಡು ಅವರ ಪಾಲಿತ್ತು. 2019ರ ಚುನಾವಣೆಯಲ್ಲಿ ನಾವೆಲ್ಲ ಒಟ್ಟಾಗಿ ಮೋದಿ ಅವರನ್ನು ಕೆಳಗಿಳಸಲು ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.
ರಾಷ್ಟ್ರದಲ್ಲಿ ಬಿಜೆಪಿ, ಶಿವಸೇನೆ, ಅಕಾಲಿದಳ ಹೊರತುಪಡಿಸಿದರೆ ಉಳಿದ ಎಲ್ಲ ಪಕ್ಷಗಳು ಒಂದೇ ವೇದಿಕೆಗೆ ಬರುತ್ತಿದ್ದು, ಇದರ ನೇತೃತ್ವವನ್ನು ಕಾಂಗ್ರೆಸ್ ವಹಿಸಿಕೊಳ್ಳಲಿದೆ. ನರೇಂದ್ರ ಮೋದಿ ಪ್ರಧಾನಮಂತ್ರಿಯಾದ ಬಳಿಕ ಜರುಗಿದ 13 ಉಪ ಚುನಾವಣೆಯಲ್ಲಿ ಒಂದು ಕಡೆ ಮಾತ್ರ ಬಿಜೆಪಿ ಗೆದ್ದಿದೆ. ಇದು, ದೇಶದಲ್ಲಿ ಜಾತ್ಯತೀತ ಶಕ್ತಿಗಳು ಬಲಗೊಂಡಿವೆ ಎಂಬುದನ್ನು ಸೂಚಿಸುತ್ತದೆ ಎಂದು ತಿಳಿಸಿದರು.
ರಾಜ್ಯದ ಉಪಚುನಾವಣೆಗಳು ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣೆಯ ಪೂರ್ವ ಪರೀಕ್ಷೆಯಾಗಿದೆ. ಈ ಪರೀಕ್ಷೆಯಲ್ಲಿ ನಾವು ಪಾಸ್ ಆಗುತ್ತೇವೆ. ಸಣ್ಣಪುಟ್ಟಭಿನ್ನಾಭಿಪ್ರಾಯಗಳಿಗೂ ಅವಕಾಶ ಮಾಡಿಕೊಡದೆ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ. ಉಪ ಚುನಾವಣೆ ಎಂದು ನಿರ್ಲಕ್ಷ್ಯ ಮಾಡುವುದಿಲ್ಲ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.