ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಗೆ ಹೀನಾಯ ಸೋಲು

Published : May 20, 2017, 11:10 AM ISTUpdated : Apr 11, 2018, 12:49 PM IST
ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಗೆ ಹೀನಾಯ ಸೋಲು

ಸಾರಾಂಶ

ಕಾಂಗ್ರೆಸ್‌'ನ ಹಿರಿಯ ಮುಖಂಡರ ವಾರಸುದಾರರು ಸ್ಪರ್ಧಿಸಿದ್ದ ಚುನಾವಣೆಯಲ್ಲಿ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದ ರಘುವೀರ್‌ಗೌಡ ಜಯಗಳಿಸಿದ್ದಾರೆ. ನಿವೃತ್ತ ಪೊಲೀಸ್‌ ಅಧಿಕಾರಿ ಬಿ.ಕೆ. ಶಿವರಾಂ (ಬಿ.ಕೆ. ಹರಿಪ್ರಸಾದ್‌ ಸಹೋದರ) ಪುತ್ರ ರಕ್ಷಿತ್‌ ಶಿವರಾಂ 3200 ಮತ, ವಿಶ್ವನಾಥ್‌ 1,860 ಮತ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯಾರೆಡ್ಡಿ 1,740 ಮತ ಗಳಿಸುವ ಮೂಲಕ ನಂತರದ ಸ್ಥಾನ ಗಳಿಸಿದ್ದಾರೆ.

ನಗರ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ರಘುವೀರ್‌'ಗೌಡ ಆಯ್ಕೆ | ಬಿ.ಕೆ.ಶಿವರಾಂ ಪುತ್ರಗೆ 2ನೇ, ಸೌಮ್ಯರೆಡ್ಡಿಗೆ 4ನೇ ಸ್ಥಾನ

ಬೆಂಗಳೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ಸಮಿತಿ ರಾಜ್ಯಾಧ್ಯಕ್ಷ, ಜಿಲ್ಲಾಧ್ಯಕ್ಷ ಹಾಗೂ ವಿವಿಧ ಪದಾಧಿಕಾರಿ ಹುದ್ದೆಗಳಿಗೆ ನಡೆದ ಚುನಾವಣೆಯಲ್ಲಿ ಬೆಂಗಳೂರು ನಗರದ ಘಟಕದ ಅಧ್ಯಕ್ಷರಾಗಿ ರಘುವೀರ್‌ಗೌಡ ಗೆಲುವು ಸಾಧಿಸಿದ್ದು, ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾರೆಡ್ಡಿ ಘೋರ ಪರಾಜಯ ಕಂಡಿದ್ದಾರೆ.

ಮೇ 14ರಿಂದ 17ರವರೆಗೆ ನಡೆದ ಚುನಾವಣೆಯಲ್ಲಿ ಬೆಂಗಳೂರು ನಗರ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ರಘುವೀರ್‌ ಗೌಡ 3,890 ಮತ ಗಳಿಸುವ ಮೂಲಕ 690 ಮತಗಳ ಅಂತರದಿಂದ ಸಮೀಪ ಸ್ಪರ್ಧಿ ರಕ್ಷಿತ್‌ ಶಿವರಾಂ ವಿರುದ್ಧ ಜಯಗಳಿಸಿದ್ದಾರೆ. 

ಕಾಂಗ್ರೆಸ್‌'ನ ಹಿರಿಯ ಮುಖಂಡರ ವಾರಸುದಾರರು ಸ್ಪರ್ಧಿಸಿದ್ದ ಚುನಾವಣೆಯಲ್ಲಿ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದ ರಘುವೀರ್‌ಗೌಡ ಜಯಗಳಿಸಿದ್ದಾರೆ. ನಿವೃತ್ತ ಪೊಲೀಸ್‌ ಅಧಿಕಾರಿ ಬಿ.ಕೆ. ಶಿವರಾಂ (ಬಿ.ಕೆ. ಹರಿಪ್ರಸಾದ್‌ ಸಹೋದರ) ಪುತ್ರ ರಕ್ಷಿತ್‌ ಶಿವರಾಂ 3200 ಮತ, ವಿಶ್ವನಾಥ್‌ 1,860 ಮತ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯಾರೆಡ್ಡಿ 1,740 ಮತ ಗಳಿಸುವ ಮೂಲಕ ನಂತರದ ಸ್ಥಾನ ಗಳಿಸಿದ್ದಾರೆ.

ಆದರೆ, ಈ ಬಾರಿಯ ಯುವ ಕಾಂಗ್ರೆಸ್‌ ಚುನಾವಣೆ ತೀವ್ರ ಗೊಂದಲ ಹಾಗೂ ಮತದಾನದ ಅಕ್ರಮಗಳಿಗೆ ತುತ್ತಾಗಿದೆ ಎಂದು ಹೇಳಲಾಗುತ್ತಿದೆ. ಶನಿವಾರ ರಾಜ್ಯ ಘಟಕದ ಅಧ್ಯಕ್ಷರ ಚುನಾವಣೆಗೆ ಮತ ಏಣಿಕೆ ನಡೆಯಲಿದೆ. ಈ ಚುನಾವಣೆಗೆ ಮತದಾನದ ವೇಳೆ ಹಲವು ಅಕ್ರಮಗಳು ನಡೆದಿವೆ ಹಾಗೂ ಇದಕ್ಕೆ ಯುವ ಕಾಂಗ್ರೆಸ್‌ ಅಧ್ಯಕ್ಷ ರಿಜ್ವಾನ್‌ ಅರ್ಷದ್‌ ಹಾಗೂ ಅವರ ತಂಡವೇ ಹೊಣೆ ಎಂದೂ ದೂರಲಾಗುತ್ತಿದೆ.

ಕನ್ನಡಪ್ರಭ ವಾರ್ತೆ
epaper.kannadaprabha.in

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮೀ ಪ್ರಕರಣ ಬೆಳಕಿಗೆ ತಂದ ಶಾಸಕ ಮಹೇಶ ಟೆಂಗಿನಕಾಯಿಗೆ ಭರ್ಜರಿ ಸ್ವಾಗತ
India Latest News Live: ನಿತೀಶ್‌ ಹಿಜಾಬ್ ಎಳೆದಿದ್ದ ವೈದ್ಯೆಗೆ ಜಾರ್ಖಂಡ್‌ 3 ಲಕ್ಷ ರು. ವೇತನ ಆಫರ್‌