
ನವದೆಹಲಿ[ಜು.16]: ದೇಶದ ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ಪುತ್ರ ಹಾಗೂ ಸಮಾಜವಾದಿ ಪಕ್ಷದ ನಾಯಕ ನೀರಜ್ ಶೇಖರ್ ಅವರು ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಅವರು ಶೀಘ್ರವೇ ಎಸ್‌ಪಿ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ನೀರಜ್ ಅವರ ರಾಜೀನಾಮೆಯನ್ನು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಅವರು ಅಂಗೀಕರಿಸಿದ್ದಾರೆ.ರಜ್ ಅವರ ಮೇಲ್ಮನೆ ಅವಧಿಯು 2020ರ ನವೆಂಬರ್ ಕೊನೆಗೆ ಮುಕ್ತಾಯವಾಗಬೇಕಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.