ಖ್ಯಾತ ಇಸ್ರೋ ವಿಜ್ಞಾನಿ ಡಾ.ಎಸ್.ಕೆ. ಶಿವಕುಮಾರ್ ನಿಧನ| ಇಸ್ರೋ ಲೇಔಟ್ನ ಅವರ ನಿವಾಸದಲ್ಲಿ ಅಂತಿಮ ದರ್ಶನ| ಮಧ್ಯಾಹ್ನ 3 ಗಂಟೆಗೆ ಬನಶಂಕರಿಯಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ
ಬೆಂಗಳೂರು[ಏ.13]: ಬಾಹ್ಯಾಕಾಶ ಕೇಂದ್ರದ ನಿರ್ದೇಶಕರಾಗಿದ್ದ ಖ್ಯಾತ ವಿಜ್ಞಾನಿ, ಕನ್ನಡಿಗ ಡಾ.ಎಸ್.ಕೆ. ಶಿವಕುಮಾರ್ ಇಂದು ಗುರುವಾರ ಬೆಳಗ್ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಜಾಂಡೀಸ್ ನಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಆದರೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.
undefined
ಪದ್ಮಶ್ರೀ ಪುರಸ್ಕೃತರಾದ ಎಸ್.ಕೆ. ಶಿವಕುಮಾರ್ ಇಸ್ರೋ ನಿರ್ದೇಶಕರಾಗಿದ್ದರು. ಚಂದ್ರಯಾನ ಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು ಪ್ರಸ್ತುತ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
ಇಸ್ರೋ ಲೇಔಟ್ನ ಅವರ ನಿವಾಸದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಬನಶಂಕರಿಯಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ