ಕೆ.ಸಿ. ವ್ಯಾಲಿ ಯೋಜನೆ: ಪ್ರತ್ಯೇಕ ಪೀಠ ರಚನೆಗೆ ಹೈಕೋರ್ಟ್ ನಿರ್ದೇಶನ

Published : Jul 04, 2018, 03:58 PM IST
ಕೆ.ಸಿ. ವ್ಯಾಲಿ ಯೋಜನೆ: ಪ್ರತ್ಯೇಕ ಪೀಠ ರಚನೆಗೆ ಹೈಕೋರ್ಟ್ ನಿರ್ದೇಶನ

ಸಾರಾಂಶ

ಬೆಂಗಳೂರಿನ ಕೊಳಚೆ ನೀರನ್ನು ಸಂಸ್ಕರಿಸಿ ಕೋಲಾರದ ಕೆರೆಗಳಿಗೆ ಹರಿಸುವ ಕೆ.ಸಿ. ವ್ಯಾಲಿ ಯೋಜನೆ ಕೆ.ಸಿ. ವ್ಯಾಲಿ ನೀರಿನ ಪರಿಶುದ್ದತೆ ಬಗ್ಗೆ ಆತಂಕ ವ್ಯಕ್ತಪಡಿಸಿ ಸಲ್ಲಿಸಲಾಗಿದ್ದ ಪಿಐಎಲ್ ವಿಚಾರಣೆ

ಬೆಂಗಳೂರು: ಕೆ.ಸಿ. ವ್ಯಾಲಿ ಯೋಜನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್,  ಇತ್ಯರ್ಥಪಡಿಸಲು ವಿಶೇಷ ಪ್ರತ್ಯೇಕ ಪೀಠ ರಚನೆಗೆ ನಿರ್ದೇಶನ ನೀಡಿದೆ. 

ಕೆ.ಸಿ. ವ್ಯಾಲಿ ನೀರಿನ ಪರಿಶುದ್ದತೆ ಬಗ್ಗೆ ಆತಂಕ ವ್ಯಕ್ತಪಡಿಸಿ ಸಲ್ಲಿಸಲಾಗಿದ್ದ ಪಿಐಎಲ್ ಆಲಿಸಿದ,  ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

ಇದನ್ನೂ ಓದಿ: ‘ಕೆ.ಸಿ. ವ್ಯಾಲಿ’ ಎಂಬ ಸುಂದರ ಹೆಸರಿನ ಯೋಜನೆಯ ‘ಕೊಳಕು’ ಮುಖ

ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಆದಷ್ಟು ಬೇಗ ವಿಶೇಷ ಪೀಠ ರಚಿಸಿ ಪ್ರಕರಣ ಇತ್ಯರ್ಥಪಡಿಸಲು ರಿಜಿಸ್ಟ್ರಾರ್ ಜನರಲ್ ಗೆ ಸೂಚಿಸಿದೆ.

ಬೆಂಗಳೂರಿನ ಕೊಳಚೆ ನೀರನ್ನು ಸಂಸ್ಕರಿಸಿ ಕೋಲಾರದ ಕೆರೆಗಳಿಗೆ ಹರಿಸುವ ಕೆ.ಸಿ. ವ್ಯಾಲಿ ಯೋಜನೆ  ಬಗ್ಗೆ ಕೋಲಾರ-ಚಿಕ್ಕಬಳ್ಳಾಪುರದ ಶಾಶ್ವತ ನೀರಾವರಿ ಹೋರಾಟಗಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಕಳೆದ ತಿಂಗಳು ಪ್ರಾಯೋಗಿಕವಾಗಿ ನರಸಾಪುರದ ಬಳಿಯ ಲಕ್ಷ್ಮೀ ಸಾಗರ ಕೆರೆಗೆ ನೀರು ಹರಿಸಲಾಗುತ್ತಿದೆ.  

ಇದನ್ನೂ ಓದಿ: ‘ಕೆ.ಸಿ. ವ್ಯಾಲಿ ನೀರಿನ ಗುಣಮಟ್ಟ ಅಧ್ಯಯನಕ್ಕೆ ಸಮಿತಿ ರಚಿಸಿ’

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಮಾನದಲ್ಲೇ CPR ನೀಡಿ ಅಮೆರಿಕ ಯುವತಿಯ ಪ್ರಾಣ ಉಳಿಸಿದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್
ಪ್ರಧಾನಿ ಮಾಡಿದ್ದೆಲ್ಲಾ ತಪ್ಪು ಅನ್ನೋದು ತಪ್ಪು: ಕೈಗೆ ಮಾಜಿ ಕಾಂಗ್ರೆಸ್ಸಿಗನ ಸಲಹೆ