ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಭೂಕಂಟಕ| 2006ರಲ್ಲಿ ವಡೇರಹಳ್ಳಿಯ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್.
ಬೆಂಗಳೂರು, (ಸೆ.05): ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಭೂಕಂಟಕ ಎದುರಾಗಿದ್ದು, ಬೆಂಗಳೂರು ಹೊರಲಯದ ವಡೇರಹಳ್ಳಿಯ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು (ಗುರುವಾರ) ಸಮನ್ಸ್ ನೀಡಿದೆ.
ಅಕ್ಟೋಬರ್ 4 ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ನೀಡಿದೆ. 2006ರಲ್ಲಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಬನಶಂಕರಿ 5ನೇ ಸ್ಟೇಜ್ನಲ್ಲಿರುವ ವಡೇರಹಳ್ಳಿಯಲ್ಲಿ 2 ಎಕರೆ 24 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು 2012 ರಲ್ಲಿ ದೂರು ದಾಖಲಾಗಿತ್ತು.
undefined
ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿಯ ಮಹದೇವಸ್ವಾಮಿ ಎಂಬುವರು ದೂರು ದಾಖಲಿಸಿದ್ದರು. ಪ್ರಕರಣ ಕುರಿತು ನ್ಯಾಯಾಲಯ ತನಿಖೆಗೂ ಆದೇಶಿಸಿತ್ತು. 6 ತಿಂಗಳ ಹಿಂದೆ ಲೋಕಾಯುಕ್ತ ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿದ್ದರು.
ಇದನ್ನು ಪ್ರಶ್ನಿಸಿ ಮಹದೇವಸ್ವಾಮಿ ಮತ್ತೆ ನ್ಯಾಯಾಲಯದ ಮೆಟ್ಟಿಲೇರಿದ್ದರು. 2012ರಿಂದ ಸುಮ್ಮನಿದ್ದು ಆರು ತಿಂಗಳ ಹಿಂದೆ ಬಿ.ರಿಪೋರ್ಟ್ ಸಲ್ಲಿಸಿರುವ ಬಗ್ಗೆ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದರು.
ಇದೀಗ ಪ್ರಕರಣದ ಮರುತನಿಖೆಗೆ ಲೋಕಾಯುಕ್ತ ನ್ಯಾಯಾಧೀಶ ರಾಮಚಂದ್ರ ಡಿ. ಉಡಿಗಾರ್ ಅವರು ಆದೇಶ ನೀಡಿದ್ದು, ಇದೀಗ ವಿಚಾರಣೆಗೆ ಹಾಜರಾಗುವಂತೆ ಎಚ್ಡಿಕೆಗೆ ಸಮನ್ಸ್ ನೀಡಲಾಗಿದೆ
ಸೆ.05ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ