
ಬೆಂಗಳೂರು[ಮಾ. 10] ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆದರೆ ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ನಡೆಯಲಿದೆ.ಇದೆಲ್ಲದಕ್ಕೂ ಮೀರಿ ಈ ಬಾರಿ ಆಯೋಗದ ಘೋಷಣೆಯಲ್ಲಿ ಅನೇಕ ಕುತೂಹಲಕಾರಿ ಅಂಶಗಳು ಇವೆ.
* ತಮಿಳುನಾಡಲ್ಲಿ 39 ಲೋಕಸಭಾ ಕ್ಷೇತ್ರವಿದ್ದರೂ ಒಂದೇ ಹಂತದ ಚುನಾವಣೆ, ಆದರೆ ಕರ್ನಾಟಕದಲ್ಲಿ 28 ಕ್ಷೇತ್ರಗಳಿದ್ದರೂ ಎರಡು ಹಂತ!
ಕರ್ನಾಟಕದಲ್ಲಿ 2 ಹಂತದಲ್ಲಿ ಲೋಕಸಭಾ ಚುನಾವಣೆ, ಏ.18,23ರಂದು ಮತದಾನ
* ಅತಿಹೆಚ್ಚು ಕ್ಷೇತ್ರಗಳನ್ನು[80] ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಏಳೂ ಹಂತದಲ್ಲಿ ಮತದಾನ ನಡೆಯಲಿದೆ.
* ಮೊದಲ ಸಾರಿ ಅಭ್ಯರ್ಥಿಯ ಫೋಟೊವನ್ನು ಅವರ ಚಿಹ್ನೆಯ ಜತೆ ಇವಿಎಂನಲ್ಲಿ ಬಳಕೆ ಮಾಡಲಾಗುತ್ತಿದೆ.
* ಅಭ್ಯರ್ಥಿಗಳು ಕಳೆದ 5 ವರ್ಷದ ಆದಾಯ ತೆರಿಗೆ ದಾಖಲೆ ಸಲ್ಲಿಸಬೇಕು
*ಸೋಶಿಯಲ್ ಮೀಡಿಯಾ ಪ್ರಚಾರದ ಮೇಲೆ ಹದ್ದಿನ ಕಣ್ಣಿಡಲಾಗಿದ್ದು ಎಲೆಕ್ಷನ್ ಕಮಿಷನ್ ಹೇಳಿರುವ ಆ್ಯಪ್ ಬಳಸಿ ಸಾರ್ವಜನಿಕರು ದೂರು ದಾಖಲಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.