
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸೋಮವಾರ ಅಪರೂಪದ ವಿವಾಹದ ದಿಬ್ಬಣವೊಂದಕ್ಕೆ ನಾಗರಿಕರು ಸಾಕ್ಷಿಗಳಾದರು. ಪುತ್ತೂರು ನಗರದಲ್ಲಿ ಎಕ್ಸ್‌ಕವೇಟರ್ ಆಪರೇಟರ್ ಆಗಿರುವ ಚೇತನ್ ಅವರ ವಿವಾಹ ಮಮತಾ ಎಂಬವರೊಂದಿಗೆ ಕುಂಬ್ರದ ಕೊಯ್ಲತ್ತಡ್ಕ ಶಿವಕೃಪಾ ಆಡಿಟೋರಿಯಂನಲ್ಲಿ ಸೋಮವಾರ ನಡೆಯಿತು.
ಈ ಸಂದರ್ಭ ಮದುವೆಯ ದಿಬ್ಬಣ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸುಮಾರು 2 ಕಿ.ಮೀ. ದೂರ ಎಕ್ಸ್‌ಕವೇಟರ್ (ಜೆಸಿಬಿ ಎಂದೇ ಜನಜನಿತ)ನಲ್ಲೇ ಸಾಗಿದ್ದು ವಿಶೇಷವಾಗಿತ್ತು. ಈ ಚಿತ್ರ ಈಗ ಸಾಮಾಜಿಕ ಜಾಲ ತಾಣದಲ್ಲೂ ಪ್ರಚಾರ ಪಡೆಯುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.