
ಮಂಡ್ಯ [ಜು.15] : ರಾಜ್ಯ ರಾಜಕೀಯ ಪ್ರಹಸನದ ನಡುವೆ ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿ ಎಂದು ಅವರ ಸ್ವಗ್ರಾಮದಲ್ಲಿ ವಿಶೇಷ ಪೂಜೆ ನಡೆಸಲಾಗುತ್ತಿದೆ.
ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆಯಲ್ಲಿ ಹೋಮ, ಹವನ, ವಿಶೇಷ ಪೂಜೆ ನಡೆಯಲಿದೆ. ಗ್ರಾಮ ದೇವತೆ ಗೋಗಲಮ್ಮ ಸನ್ನಿಧಿಯಲ್ಲಿ ಪೂಜಾ ಕೈಂಕರ್ಯಗಳು ನೆರವೇರಲಿವೆ.
ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಲಿ ಎನ್ನುವ ಉದ್ದೇಶದಿಂದ ಅವರ ಸಂಬಂಧಿಗಳ ನೇತೃತ್ವದಲ್ಲಿ ಮನೆ ದೇವರಾದ ಗವಿಮಠದ ಸ್ವಾತಂತ್ರ್ಯ ಸಿದ್ದಲಿಂಗೇಶ್ವರನಿಗೂ ವಿಶೇಷ ಪೂಜೆ ಮಾಡಲಾಗುತ್ತದೆ.
ಯಡಿಯೂರಪ್ಪ ಸಂಕಷ್ಟದಲ್ಲಿದ್ದಾಗ ಹಾಗೂ ಅಧಿಕಾರಕ್ಕೇರುವ ಸಂದರ್ಭದಲ್ಲಿ ಗೋಗಲಮ್ಮನಿಗೆ ಹೋಮ, ಪೂಜೆ ಸಲ್ಲಿಸುವುದು ವಾಡಿಕೆಯಾಗಿದ್ದು, ಅದರಂತೆ ಈ ಬಾರಿಯೂ ದೋಸ್ತಿ ಸರ್ಕಾರ ಪತನವಾಗಿ ಯಡಿಯೂರಪ್ಪ ಮುಖ್ಯಮಂತ್ರಿ ಗಾದಿಗೇರಲಿ ಎಂದು ಹೋಮ, ಹವನ ನಡೆಸಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.