
ಬೆಂಗಳೂರು: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಪ್ರಯಾಣಿಕರ ಅನುಕೂಲಕ್ಕಾಗಿ ಆ.23ರಿಂದ 26ರ ವರೆಗೆ ಒಂದು ಸಾವಿರ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ಪಾವಗಡ, ಹೊಸದುರ್ಗ ಮೊದಲಾದ ಸ್ಥಗಳಿಗೆ ವಿಶೇಷ್ ಬಸ್‌ಗಳು ಸಂಚರಿಸಲಿವೆ.
ಮೈಸೂರು ರಸ್ತೆಯ ಸ್ಯಾಟಿಲೆಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದತ್ತ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ. ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದಿಂದ ತಮಿಳುನಾಡು ಮತ್ತು ಆಂಧ್ರ ಪ್ರದೇಶದ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ತೆರಳಲಿವೆ.
ಅದೇ ರೀತಿ ನಿಗಮದ ವ್ಯಾಪ್ತಿಯ ಎಲ್ಲ ತಾಲೂಕು ಮತ್ತು ಜಿಲ್ಲಾ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಒತ್ತಡಕ್ಕೆ ಅನುಸಾರ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಹಬ್ಬದ ಬಳಿಕ ನಗರಕ್ಕೆ ಮರಳುವ ಪ್ರಯಾಣಿಕರಿಗಾಗಿ ಆ.೨೭ರಂದು ರಾಜ್ಯ ಹಾಗೂ ಹೊರ ರಾಜ್ಯಗಳಿಂದ ನಗರಕ್ಕೆ ವಿಶೇಷ ಬಸ್‌ಗಳ ಸೇವೆ ಲಭ್ಯವಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.