2 ಕಡೆ ಸ್ಪರ್ಧೆ ಹಿಂದಿನ ರಹಸ್ಯ ಬಿಚ್ಚಿಟ್ಟ ಶ್ರೀ ರಾಮುಲು

Published : Oct 18, 2018, 09:45 AM IST
2 ಕಡೆ ಸ್ಪರ್ಧೆ ಹಿಂದಿನ ರಹಸ್ಯ ಬಿಚ್ಚಿಟ್ಟ ಶ್ರೀ ರಾಮುಲು

ಸಾರಾಂಶ

ಬಿಜೆಪಿ ಮುಖಂಡ ಶ್ರೀ ರಾಮುಲು ಅವರು ತಮ್ಮ ರಾಜಕೀಯದ ಸೀಕ್ರೇಟ್ ಒಂದನ್ನು ಇದೀಗ ಬಿಚ್ಚಿಟ್ಟಿದ್ದಾರೆ. ತಾವು 2 ಕಡೆ ಸ್ಪರ್ಧೆ ಮಾಡಿದ್ದುದರ ಹಿಂದಿನ ಕಾರಣ ರಿವೀಲ್ ಮಾಡಿದ್ದಾರೆ.

ಹೂವಿನಹಡಗಲಿ: ಬಿಜೆಪಿ ಸರ್ಕಾರ ರಚಿಸಲು ಅನುಕೂಲ ಆಗಬೇಕು ಎಂಬ ಉದ್ದೇಶದಿಂದ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ ಹಾಗೂ ಮೊಳಕಾಲ್ಮೂರು ವಿಧಾನ ಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಬೇಕಾಯಿತು ಎಂದು ಶಾಸಕ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಬುಧವಾರ ತಾಲೂಕಿನ ಸುಕ್ಷೇತ್ರ ಮೈಲಾರಲಿಂಗೇಶ್ವರ ದೇವರ ದರ್ಶನ ಪಡೆದ ನಂತರ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿ, ಬಳ್ಳಾರಿ ಲೋಕಸಭಾ ಉಪ ಚುನಾವಣೆಗೆ 4 ರಿಂದ 5 ಸಮಿತಿ ರಚನೆ ಮಾಡಿಕೊಂಡಿರುವ ಮೈತ್ರಿ ಸರ್ಕಾರದ ಸಚಿವರು, ಶಾಸಕರು ಬಂದು ಎಷ್ಟೇ ಪ್ರಚಾರ ಮಾಡಿದರೂ ಬಳ್ಳಾರಿ ಜಿಲ್ಲೆಯ ಮತದಾರರ ಮನಸ್ಥಿತಿ ಬದಲಾವಣೆ ಆಗಲ್ಲ. ಮತ್ತೆ ಬಿಜೆಪಿಯ ಅಭ್ಯರ್ಥಿಯನ್ನು ಬೆಂಬಲಿಸಿ ಅತಿ ಹೆಚ್ಚು ಮತಗಳಿಂದ ಗೆಲ್ಲಿಸುವ ವಿಶ್ವಾಸವಿದೆ ಎಂದರು.

ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ನಾವು ಹಲವಾರು ವರ್ಷಗಳಿಂದ ನೋಡುತ್ತಾ ಬಂದಿದ್ದೇವೆ. ನಾವು ಅವರು ಸಮಕಾಲೀನ ರಾಜಕಾರಣಿಗಳು. ಜಿಲ್ಲೆಯ ಜನ ಅವರನ್ನು ಹೊಸದಾಗಿ ನೋಡುತ್ತಿದ್ದಾರೆ ಅಷ್ಟೇ. ಹಿಂದಿನಿಂದ ನಾನು ಮತ್ತು ಶಾಂತಾ ಜನರ ಆಶೀರ್ವಾದದ ಮೇರೆಗೆ ಒಳ್ಳೆಯ ಕೆಲಸ ಮಾಡುತ್ತಾ ಬಂದಿದ್ದೇವೆ. ಮೈತ್ರಿ ಸರ್ಕಾರದ ಸಚಿವರು, ಶಾಸಕರು, ಸಂಸದರ ದಂಡೇ ಬಂದರೂ ಮತದಾರರು ನಮ್ಮ ಕೈಬಿಡಲು ಸಾಧ್ಯವಿಲ್ಲ ಎಂದರು.

ತಪ್ಪನ್ನು ಹೊಟ್ಟೆಗೆ ಹಾಕಿಕೊಂಡು ಬೆಂಬಲಿಸಿ:  ಹಿಂದಿನ ವಿಧಾನಸಭಾ ಚುನಾವಣೆಯ ವೇಳೆ ಪಕ್ಷದಲ್ಲಿ ಸಾಕಷ್ಟುತಪ್ಪುಗಳು ನಡೆದರೂ, ಅದಕ್ಕೆ ಹೆಚ್ಚು ಮಾನ್ಯತೆ ನೀಡದೆ ಅವುಗಳನ್ನು ಹೊಟ್ಟೆಯಲ್ಲಿ ಹಾಕಿಕೊಂಡು ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೆ.ಶಾಂತಾ ಅವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು