ರಸ್ತೆ ಅಪಘಾತದಲ್ಲಿ ರಾಜ್ಯದ ಪ್ರತಿಷ್ಠಿತ ಟ್ರಾವೆಲ್ಸ್ ಮಾಲೀಕರ ಪುತ್ರ ಸಾವು

Published : Sep 14, 2018, 10:03 PM ISTUpdated : Sep 19, 2018, 09:26 AM IST
ರಸ್ತೆ ಅಪಘಾತದಲ್ಲಿ ರಾಜ್ಯದ ಪ್ರತಿಷ್ಠಿತ ಟ್ರಾವೆಲ್ಸ್ ಮಾಲೀಕರ ಪುತ್ರ ಸಾವು

ಸಾರಾಂಶ

ರಾಜ್ಯದ ಪ್ರತಿಷ್ಠಿತ ಟ್ರಾವೇಲ್ಸ್ ಮಾಲೀಕರ ಪುತ್ರರೊಬ್ಬರು ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೆ ಗುರಿಯಾಗಿದ್ದಾರೆ. ಪಕ್ಕದ ತಮಿಳುನಾಡಿನಲ್ಲಿ ಅವಘಡ ಸಂಭವಿಸಿದೆ.

ಉಡುಪಿ‌[ಸೆ.14]  ಕುಂದಾಪುರ ಮೂಲದ ಶ್ರೀ ದುರ್ಗಾಂಬಾ ಟ್ರಾವೆಲ್ಸ್ ಮಾಲೀಕ ಸಚ್ಚಿದಾನಂದ ಚಾತ್ರ ಅವರ ಪುತ್ರ ಸುನಿಲ್ ಚಾತ್ರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸುನಿಲ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ತಮಿಳುನಾಡಿನ ನಮಕ್ಕಲ್ ಜಿಲ್ಲೆಯಲ್ಲಿ ಪಜೆರೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಧ್ಯಾಹ್ನ ಮೂರು ಗಂಟೆ ಹೊತ್ತಿಗೆ ನಡೆದ ರಸ್ತೆ ಅಪಘಾತದಲ್ಲಿ ಸುನಿಲ್ ಚಾತ್ರ ಸಾವನ್ನಪ್ಪಿದ್ದಾರೆ. ತಮಿಳುನಾಡಿನ ನಮಕ್ಕಲ್ ಜಿಲ್ಲೆಯಲ್ಲಿ ಘೋರ ಅಪಘಾತ ಸಂಭವಿಸಿದೆ. ಕಾರು ಸ್ಕಿಡ್ ಆಡಿ ನಿಯಂತ್ರಣ ತಪ್ಪಿದೆ.

ವ್ಯವಹಾರ ನಿಮಿತ್ತ ತಮಿಳುನಾಡಿನಿಂದ ಚಾತ್ರ ಹಿಂದಿರುಗುತ್ತಿದ್ದರು. ಛತ್ತೀಸ್ ಘಡ ಮತ್ತು ಮಧ್ಯ ಪ್ರದೇಶದಲ್ಲಿಯೂ ವ್ಯವಹಾರ ಹೊಂದಿದ್ದರು. ಚಾಲಕನ ಸ್ಥಿತಿಯೂ ಗಂಭೀರವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.ಜಿಲ್ಲೆಯ ಪ್ರಸಿದ್ದ ಕಮಲಶಿಲೆ ದೇವಾಲಯದ ಆಡಳಿತ ಮೊಕೇಸ್ತರರಾದ ಸಚ್ಚಿದಾನಂದ ಚಾತ್ರರ ಪುತ್ರರಾಗಿರುವ ಸುನಿಲ್ ತಮಿಳುನಾಡಿಗೆ ತೆರಳಿದ್ದರು. ಮೃತರು (41) ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ.

 

 


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಮೊದಲ ಹೈಡ್ರೋಜನ್‌ ಚಾಲಿತ ವಾಟರ್‌ ಟ್ಯಾಕ್ಸಿ ವಾರಾಣಸಿಯಲ್ಲಿ ಶುರು
ಎಐ ನಿರ್ಮಾತೃಗಳಿಗೆ 2025ರ ಟೈಮ್ ವರ್ಷದ ವ್ಯಕ್ತಿ ಗೌರವ!