
ಕೊಪ್ಪಳ್ಳ (ಏ.21): ಕನ್ನಡ ರಾಜ್ಯ ರಮಾರಮಣ, 1509 ರಿಂದ 1529ರವರೆಗೆ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿಯಾಗಿ ಮೆರೆದಿದ್ದ ಶ್ರೀಕೃಷ್ಣ ದೇವರಾಯನ ಸಮಾಧಿಯ ಮೇಲೆ ಮಾಂಸ ಕಟ್ ಮಾಡಿ ಅಪಚಾರ ಎಸಗಿದ ಘಟನೆ ನಡೆದಿದೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ ಮಾಡಿದ್ದಾರೆ. ಆನೆಗೊಂದಿಯ ಶ್ರೀಕೃಷ್ಣ ದೇವರಾಯ ಸಮಾಧಿಯಲ್ಲಿ ಮೌಂಸ ಕತ್ತರಿಸಿ ಅದನ್ನು ಕ್ಲೀನ್ ಮಾಡಿದ ಘಟನೆಯನ್ನು ಖಂಡಿಸಿ ಯತ್ನಾಳ್ ಟ್ವೀಟ್ ಮಾಡಿದ್ದಾರೆ. ಘಟನೆಯ ಬಗ್ಗೆ ಅವರು ಭಾರೀ ಆಘಾತ ವ್ಯಕ್ತಪಡಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯ ತುಂಗಭದ್ರಾ ನದಿಯ ತಟದಲ್ಲಿ ಮೂರು ರಾಯರ ಗಂಡ ಶ್ರೀಕೃಷ್ಣದೇವರಾಯ ಸಮಾಧಿ ಇದೆ.
ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರನಾಗಿದ್ದ ವಿಜಯನಗರ ಸಾಮ್ರಾಜ್ಯದ ಮಹಾಚಕ್ರವರ್ತಿ ಕೃಷ್ಣದೇವರಾಯರಿಗೆ ಬಂದಿರುವ ದುಸ್ಥಿತಿ ಇದು. ಈ ಜಾಗವನ್ನು ಅಕ್ಷರಶಃ ಮಾಂಸದ ಮಾರುಕಟ್ಟೆಯಾಗಿ ಪರಿವರ್ತನೆ ಮಾಡಿದ್ದು ಕೃಷ್ಣದೇವರಾಯರಿಗೆ ಮಾಡಿದ ಅಪಮಾನ. ಹಿಂದೂ ದೇವಾಲಯಗಳು,ಕೆಡವಿ ದೇಶದ ಸಂಪತ್ತು ದೋಚಿದ ಔರಂಗಜೇಬನ ಸಮಾಧಿಯನ್ನು ಭಾರತೀಯ ಪುರಾತತ್ವ ಇಲಾಖೆ ರಕ್ಷಣೆ ಮಾಡುತ್ತದೆ.
ಆದರೆ, ಪರಾಕ್ರಮಿ,ಕಲೆ ಸಾಹಿತ್ಯ ಪೋಷಕ ದೇವರಾಯರ ಸಮಾಧಿಗೆ ಯಾಕೆ ನಿರ್ಲಕ್ಷ್ಯ. ಇದು ಕನ್ನಡಿಗರು ಅಲ್ಲ,ರಾಷ್ಟ್ರಕ್ಕೆ ಮಾಡಿದ ಅಪಮಾನ ಮೌಂಸವನ್ನು ಮಾರುತ್ತ ಸ್ಥಳದ ಪಾವಿತ್ರ್ಯ ಹಾಳು ಮಾಡುತ್ತಿರೋರ ಜಾಗ ಖಾಲಿ ಮಾಡಲು ಸೂಚಿಸಬೇಕು ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಕಾಮೆಂಟ್ ಮಾಡಿರುವ ಹಲವರು, 'ವಿಜಯನಗರ ಸಾಮ್ರಾಜ್ಯದಲ್ಲಿ ಮಾಂಸಹಾರ ಇರಲಿಲ್ವಾ?' ಎಂದು ಹೇಳುವ ಮೂಲಕ ಕೃಷ್ಣದೇವರಾಯನ ಸಮಾಧಿಯ ಮೇಲೆ ಮಾಂಸ ಕಟ್ ಮಾಡಿರುವ ಘಟನೆಯನ್ನು ಸಮರ್ಥಿಸಿಕೊಂಡಿದ್ದಾರೆ. 'ಕನ್ನಡಿಗರಾದ ನಾವು ನಿರಭಿಮಾನಿಗಳಾಗಿರುವುದೇ ಇದಕ್ಕೆಲ್ಲ ಕಾರಣ..' 'ಅದು ಹಿಂದೂ ರಾಜರ ಸಮಾದಿ,ಅದನ್ನೆಲ್ಲ ಸರಿಪಡಿಸಿದರೆ ಭಾಂದವರು ಬೇಸರ ಮಾಡಿಕೊಳ್ಳುತ್ತಾರೆ..' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
'ಸ್ಥಳದ ಪರಿಚಯಿಸುವ, ಮತ್ತು ವ್ಯಕ್ತಿತ್ವ ವಿಶೇಷವನ್ನು ತಿಳಿಸುವ ಮೂಲಕ ASI, ಮತ್ತು ರಾಜ್ಯ ಸರ್ಕಾರ, ಹಾಗೂ ಮುಖ್ಯವಾಗಿ ಸ್ಥಳಿಯ ಜನಪ್ರತಿನಿಧಿಗಳು, ಅಧಿಕಾರಿಗಳು, ಜಿಲ್ಲಾಡಳಿತ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು..' ಎಂದು ಮಹಾಂತೇಶ್ ಶಾಲೀಮಠ ಎನ್ನುವವರು ಬರೆದಿದ್ದಾರೆ.
ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರರಾಗಿದ್ದ ವಿಜಯನಗರದ ಶ್ರೀ ಕೃಷ್ಣದೇವರಾಯರ ಸಮಾಧಿಯ ದುಸ್ಥಿತಿ ಇದು. ಈ ಜಾಗವನ್ನು ಅಕ್ಷರಶಃ ಮಾಂಸದ ಮಾರುಕಟ್ಟೆಯಾಗಿ ಕೆಲ ಸ್ಥಳೀಯರು ಪರಿವರ್ತಿಸಿರುವುದು ಕನ್ನಡ ನಾಡಿನ ಹೆಮ್ಮೆಯ ಅರಸರಾದ ಅಸಾಮಾನ್ಯ ಆಡಳಿತಗಾರ, ಅಪ್ರತಿಮ ದಂಡನಾಯಕ ಶ್ರೀ ಕೃಷ್ಣದೇವರಾಯರಿಗೆ ಮಾಡಿದ ಅವಮಾನ.
ಹಿಂದೂ ದೇವಾಲಯಗಳನ್ನು ಕೆಡವಿ, ದೇಶದ ಸಂಪತ್ತನ್ನು ದೋಚಿ, ಸಾವಿರಾರು ಹಿಂದೂಗಳನ್ನು ಅಮಾನವೀಯಗಿ ಕೊಂದ ಔರಂಗಜೇಬನ ಸಮಾಧಿಗೆ ಪುರಾತತ್ವ ಸರ್ವೇಕ್ಷಣಾ ಇಲಾಖೆ [ASI] ತೆರಿಗೆದಾರರ ಹಣದಿಂದ ಸಂರಕ್ಷಣೆ ಮಾಡುತ್ತಿದೆ; ಆದರೆ, ವಿಜಯನಗರ ಸಾಮ್ರಾಜ್ಯವನ್ನು ವಿಸ್ತರಿಸಿದ ಪರಾಕ್ರಮಿ; ಕಲೆ,ಸಾಹಿತ್ಯ ರಂಗಗಳ ಪೋಷಕ ಶ್ರೀ ಕೃಷ್ಣದೇವರಾಯರ ಸಮಾಧಿಗೆ ಏಕೆ ಈ ರೀತಿಯಾದ ದಿವ್ಯ ನಿರ್ಲಕ್ಷ್ಯ ?
ಇದು ಕನ್ನಡಿಗರಿಗಷ್ಟೇ ಅಲ್ಲ ರಾಷ್ಟ್ರಕ್ಕೆ ಮಾಡಿದ ಅವಮಾನ, ಮಾಂಸವನ್ನು ಮಾರುತ್ತ ಸ್ಥಳದ ಪಾವಿತ್ರ್ಯತೆಯನ್ನು ಹಾಳು ಮಾಡುತ್ತಿರುವ ಇಂತವರನ್ನು ಜಿಲ್ಲಾಡಳಿತ ಕೂಡಲೇ ಜಾಗ ಖಾಲಿ ಮಾಡಲು ಸೂಚಿಸಬೇಕು ಹಾಗೂ ಇಲ್ಲಿ ನೈರ್ಮಲ್ಯ ಮತ್ತು ಸಮಾಧಿಯ ಪಾವಿತ್ರ್ಯತೆಯನ್ನು ಕಾಪಾಡುವ ಕೆಲಸವನ್ನು ಸರ್ಕಾರ ತುರ್ತಾಗಿ ಮಾಡಲಿ
ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರರಾಗಿದ್ದ ವಿಜಯನಗರದ ಶ್ರೀ ಕೃಷ್ಣದೇವರಾಯರ ಸಮಾಧಿಯ ದುಸ್ಥಿತಿ ಇದು. ಈ ಜಾಗವನ್ನು ಅಕ್ಷರಶಃ ಮಾಂಸದ ಮಾರುಕಟ್ಟೆಯಾಗಿ ಕೆಲ ಸ್ಥಳೀಯರು ಪರಿವರ್ತಿಸಿರುವುದು ಕನ್ನಡ ನಾಡಿನ ಹೆಮ್ಮೆಯ ಅರಸರಾದ ಅಸಾಮಾನ್ಯ ಆಡಳಿತಗಾರ, ಅಪ್ರತಿಮ ದಂಡನಾಯಕ ಶ್ರೀ ಕೃಷ್ಣದೇವರಾಯರಿಗೆ ಮಾಡಿದ ಅವಮಾನ.
ಹಿಂದೂ ದೇವಾಲಯಗಳನ್ನು… https://t.co/PhBUoXxjPn
— Basanagouda R Patil (Yatnal) (@BasanagoudaBJP) April 21, 2025
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.