
ಕೊಲಂಬೋ(ಜು.02): ಮಹತ್ವದ ಬೆಳವಣಿಗೆಯೊಂದರಲ್ಲಿ ಶ್ರೀಲಂಕಾದ ಈಸ್ಟರ್ ಆತ್ಮಹತ್ಯಾ ಬಾಂಬ್ ದಾಳಿ ತಡೆಗಟ್ಟುವಲ್ಲಿ ವಿಫಲವಾದ ಆರೋಪದ ಮೇಲೆ, ಶ್ರೀಲಂಕಾದ ಮಾಜಿ ಪೊಲೀಸ್ ಮುಖ್ಯಸ್ಥರನ್ನೇ ಬಂಧಿಸಲಾಗಿದೆ.
ಈಸ್ಟರ್ ದಾಳಿಯ ಮುನ್ಸೂಚನೆ ಇದ್ದರೂ ಕ್ರಮ ಕೈಗೊಳ್ಳದ ಆರೋಪದ ಮೇಲೆ ಶ್ರೀಲಂಕಾ ಮಾಜಿ ಪೊಲೀಸ್ ಮುಖ್ಯಸ್ಥ ಪುಜಿತ್ ಜಯಸುಂದರ್ ಹಾಗೂ ಮಾಜಿ ರಕ್ಷಣಾ ಕಾರ್ಯದರ್ಶಿ ಹೆಮಸಿರಿ ಫರ್ನಾಂಡೋ ಅವರನ್ನು ಬಂಧಿಸಲಾಗಿದೆ.
ಈಸ್ಟರ್ ದಾಳಿಯ ಬಳಿಕ ಜಯಸುಂದರ್ ಮತ್ತು ಫರ್ನಾಂಡೋ ಅವರನ್ನು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಸೇವೆಯಿಂದ ಅಮಾನತುಗೊಳಿಸಿದ್ದರು.
ಪ್ರಕರಣದ ವಿಚಾರಣೆ ನಡೆಸುತ್ತಿರುವ ಅಟಾರ್ನಿ ಜನರಲ್, ಇವರಿಬ್ಬರ ಕರ್ತವ್ಯಲೋಪ 258 ಜನರನ್ನು ಬಲಿ ಪಡೆದಿದೆ ಎಂದು ಹರಿಹಾಯ್ದರು. ಅಲ್ಲದೇ ರಾಷ್ಟ್ರಕ್ಕೆ ಅಪಾರ ನಷ್ಟ ತಂದಿತ್ತ ಈ ಅಧಿಕಾರಿಗಳನ್ನು ಕೂಡಲೇ ಬಂಧಿಸುವಂತೆ ಆದೇಶ ನೀಡಿದರು.
ಅದರಂತೆ ನ್ಯಾಷನಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫರ್ನಾಂಡೋ ಹಾಗೂ ಪೊಲೀಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯಸುಂದರ್ ಅವರನ್ನು ಬಂಧಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.