
ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರ ಕೇಂದ್ರೀಯ ಜೈಲು, ಉಗ್ರರ ನೇಮಕಾತಿಯ ತಾಣವಾದ ಬಗ್ಗೆ ಜಮ್ಮು-ಕಾಶ್ಮೀರ ಸಿಐಡಿ ಎಚ್ಚರಿಕೆ ನೀಡಿದೆ. ಪರ್ಯಾಯ ಆಡಳಿತಾತ್ಮಕ ವ್ಯವಸ್ಥೆಯನ್ನೇ ಸ್ಥಾಪಿಸಿರುವ ಇಲ್ಲಿನ ಕೈದಿಗಳು, ಉಗ್ರರ ನೇಮಕಾತಿ ಚಟುವಟಿಕೆಗಳಲ್ಲಿ ನಿರತರಾದ ಬಗ್ಗೆ ಹಲವು ಮುನ್ನೆಚ್ಚರಿಕೆಯ ಹೊರತಾಗಿಯೂ, ಇಲ್ಲಿನ ಪೊಲೀಸರು ಈ ಅಂಶ ನಿರ್ಲಕ್ಷಿಸಿದ್ದಾರೆ ಎನ್ನಲಾಗಿದೆ.
ಒಳಗಿಂದ ಒಪ್ಪಿಗೆ ಸಿಕ್ಕಲ್ಲಿ ಮಾತ್ರ ಹೊಸ ಉಗ್ರನ ನೇಮಕ ಮಾಡಿಕೊಳ್ಳುವಷ್ಟರ ಮಟ್ಟಿಗೆ ಕೇಂದ್ರೀಯ ಜೈಲಿನ ಪಾತ್ರ ಮುಖ್ಯವಾಗಿದೆ. ಆದಾಗ್ಯೂ, ಇಂತಹ ಒಪ್ಪಿಗೆ ಯಾರು ನೀಡುತ್ತಾರೆ ಎಂಬ ಪರಿಶೀಲನೆ ನಡೆಯುತ್ತಿದೆ. ಆಡಳಿತ ವ್ಯವಸ್ಥೆ ಯಂತೆ, ಜೈಲಿನೊಳಗೆ ಕೈದಿಗಳದ್ದೂ ಪರ್ಯಾಯ ಆಡಳಿತ ವ್ಯವಸ್ಥೆಯಿದೆ. 6 ಜನರ ಘೋಷಿತ ಆಡಳಿತ ಮಂಡಳಿಗೆ ಒಬ್ಬ ಮುಖ್ಯಸ್ಥನೂ ಇರುತ್ತಾನೆ. ಈ ಮಂಡಳಿ 6 ತಿಂಗಳಿಗೊಮ್ಮೆ ಬದಲಾಗುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಕೈದಿಗಳು ಇಲ್ಲಿನ ಜೈಲು ಸಿಬ್ಬಂದಿಗೆ ಪ್ರತ್ಯಕ್ಷ ಅಥವಾ ಪರೋಕ್ಷ ಬೆದರಿಕೆಯನ್ನು ಹಾಕುವುದರಿಂದ, ಇದು ಮೇಲಾಧಿಕಾರಿಗಳ ಗಮನಕ್ಕೂ ಬರುತ್ತಿಲ್ಲ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.