ಇನ್ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಶ್ರೀನಿವಾಸಪ್ರಸಾದ್ ಘೋಷಣೆ

By Suvarna Web DeskFirst Published Apr 13, 2017, 8:19 AM IST
Highlights

ಫಲಿತಾಂಶ ಪ್ರಕಟವಾದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಸಚಿವರು, ತಾನು ಇನ್ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಣೆ ಮಾಡಿದರು. ಆದರೆ, ಚುನಾವಣಾ ಕಣದಿಂದ ಹಿಂದೆ ಸರಿದರೂ ಶ್ರೀನಿವಾಸಪ್ರಸಾದ್ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯಲು ನಿರ್ಧರಿಸಿದ್ದಾರೆ.

ಮೈಸೂರು(ಏ. 13): ಜೀವನದಲ್ಲಿ ಮೊತ್ತಮೊದಲ ಬಾರಿ ಚುನಾವಣೆಯಲ್ಲಿ ಸೋಲನುಭವಿಸಿದ ಶ್ರೀನಿವಾಸಪ್ರಸಾದ್ ಅವರು ತಾನು ಇನ್ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಶತಥ ಮಾಡಿದ್ದಾರೆ. ನಂಜನಗೂಡು ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ತಾನು ಹೀನಾಯ ಸೋಲನುಭವಿಸಿದ ಬೆನ್ನಲ್ಲೇ ಶ್ರೀನಿವಾಸಪ್ರಸಾದ್ ಈ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್'ನ ಕಳಲೆ ಕೇಶವಮೂರ್ತಿಯವರು 21,334 ಮತಗಳ ಅಂತರದಿಂದ ಚುನಾವಣೆ ಗೆದ್ದಿದ್ದಾರೆ.

ಸಿದ್ದರಾಮಯ್ಯನವರ ವೈಯಕ್ತಿಕ ಧೋರಣೆ ಮತ್ತು ಆಡಳಿತ ವೈಖರಿಯಿಂದ ಬೇಸತ್ತು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಶ್ರೀನಿವಾಸ್ ಪ್ರಸಾದ್'ಗೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿತ್ತು. ಈ ಚುನಾವಣೆ ಗೆದ್ದು ಸಿದ್ದರಾಮಯ್ಯಗೆ ತಕ್ಕ ಪಾಠ ಕಲಿಸುವ ಸಂಕಲ್ಪ ಹೊಂದಿದ್ದ ಶ್ರೀನಿವಾಸಪ್ರಸಾದ್'ಗೆ ಚುನಾವಣಾ ಸೋಲು ಆಘಾತ ತಂದಿದೆ. ಫಲಿತಾಂಶ ಪ್ರಕಟವಾದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಸಚಿವರು, ತಾನು ಇನ್ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಣೆ ಮಾಡಿದರು. ಆದರೆ, ಚುನಾವಣಾ ಕಣದಿಂದ ಹಿಂದೆ ಸರಿದರೂ ಶ್ರೀನಿವಾಸಪ್ರಸಾದ್ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯಲು ನಿರ್ಧರಿಸಿದ್ದಾರೆ.

click me!