ಪೇಜಾವರಶ್ರೀಗಳ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗೆ ಶ್ರೀರಾಮಸೇನೆ ಕರೆ

By Suvarna Web DeskFirst Published Jun 26, 2017, 6:04 PM IST
Highlights

ಉಡುಪಿಯಲ್ಲಿ ಸುವರ್ಣನ್ಯೂಸ್ ಜೊತೆ ಮಾತನಾಡಿದ ಮುತಾಲಿಕ್, ಗೋಮಾಂಸ ಭಕ್ಷಕರನ್ನು ಮಠದ ಆವರಣಕ್ಕೆ ಪ್ರವೇಶಿಸಿ ನಮಾಜ್ ಮಾಡಲು ಅವಕಾಶ ಕೊಟ್ಟಿದ್ದು ಸಹ್ಯವಲ್ಲ. ಇದು ಇಡೀ ಹಿಂದೂ ಸಮಾಜಕ್ಕೆ ಮಾಡಿದಂತ ಅವಮಾನವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು(ಜೂನ್ 26): ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಮುಸ್ಲಿಮ್ ಸಮುದಾಯದವರಿಗೆ ಇಫ್ತಾರ್ ಕೂಟ ಆಯೋಜಿಸಲಾಗಿದ್ದಕ್ಕೆ ಶ್ರೀರಾಮಸೇನೆ ಆಕ್ಷೇಪ ವ್ಯಕ್ತಪಡಿಸಿದೆ. ಇಫ್ತಾರ್ ಕೂಟ ಆಯೋಜಿಸುವ ನಿರ್ಧಾರ ಕೈಗೊಂಡ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥರ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಜುಲೈ 2ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಮುತಾಲಿಕ್ ಕರೆ ನೀಡಿದ್ದಾರೆ.

ಉಡುಪಿಯಲ್ಲಿ ಸುವರ್ಣನ್ಯೂಸ್ ಜೊತೆ ಮಾತನಾಡಿದ ಮುತಾಲಿಕ್, ಗೋಮಾಂಸ ಭಕ್ಷಕರನ್ನು ಮಠದ ಆವರಣಕ್ಕೆ ಪ್ರವೇಶಿಸಿ ನಮಾಜ್ ಮಾಡಲು ಅವಕಾಶ ಕೊಟ್ಟಿದ್ದು ಸಹ್ಯವಲ್ಲ. ಇದು ಇಡೀ ಹಿಂದೂ ಸಮಾಜಕ್ಕೆ ಮಾಡಿದಂತ ಅವಮಾನವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಸಂಬಂಧ ಮುತಾಲಿಕರು ಉಡುಪಿ ಮಠದಲ್ಲಿ ಪೇಜಾವರಶ್ರೀಗಳನ್ನು ಭೇಟಿ ಮಾಡಿ ಮಾತುಕತೆ ಕೂಡ ನಡೆಸಿದ್ದಾರೆ. ಆದರೆ, ಇಫ್ತಾರ್ ಕೂಟದ ಬಗ್ಗೆ ಸ್ವಾಮೀಜಿ ನೀಡಿದ ಸಮರ್ಥನೆ ತಮಗೆ ತೃಪ್ತಿ ತಂದಿಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥರು ಹೇಳಿದ್ದಾರೆ.

click me!