ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್; ಅವಧಿಗೂ ಮುನ್ನವೇ ಪರೀಕ್ಷೆ?

Published : Oct 11, 2017, 12:16 PM ISTUpdated : Apr 11, 2018, 12:52 PM IST
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್; ಅವಧಿಗೂ ಮುನ್ನವೇ ಪರೀಕ್ಷೆ?

ಸಾರಾಂಶ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಅವಧಿಯು ಮೇ 13ಕ್ಕೆ ಪೂರ್ಣಗೊಳ್ಳಲಿದೆಯಾದರೂ, ಏಪ್ರಿಲ್ ತಿಂಗಳಲ್ಲೇ ರಾಜ್ಯದ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಹೀಗಾಗಿ, ಚುನಾವಣೆಗೆ ಮುನ್ನವೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಕ್ತಾಯಗೊಳಿಸುವುದು ಅನಿವಾರ್ಯವೆನ್ನಲಾಗಿದೆ.

ಬೆಂಗಳೂರು(ಅ. 11): ರಾಜ್ಯದ ಹತ್ತನೇ ಕ್ಲಾಸ್ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್ ಇದೆ. ಮಾರ್ಚ್-ಏಪ್ರಿಲ್'ನಲ್ಲಿ ನಡೆಯಬೇಕಿದ್ದ ಎಸ್ಸೆಸೆಲ್ಸಿ ಪರೀಕ್ಷೆಗಳು ಮಾರ್ಚ್'ನಲ್ಲೇ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ಅವಧಿಗೂ ಮುನ್ನವೇ ಪರೀಕ್ಷೆ ನಡೆಸುವ ಬಗ್ಗೆ ಚಿಂತನೆ ನಡೆದಿರುವುದು ಮೂಲಗಳಿಂದ ಸುವರ್ಣನ್ಯೂಸ್'ಗೆ ಮಾಹಿತಿ ಲಭಿಸಿದೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಇಂಥದ್ದೊಂದು ನಿರ್ಧಾರಕ್ಕೆ ಬರುತ್ತಿದೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಅವಧಿಯು ಮೇ 13ಕ್ಕೆ ಪೂರ್ಣಗೊಳ್ಳಲಿದೆಯಾದರೂ, ಏಪ್ರಿಲ್ ತಿಂಗಳಲ್ಲೇ ರಾಜ್ಯದ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಹೀಗಾಗಿ, ಚುನಾವಣೆಗೆ ಮುನ್ನವೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಕ್ತಾಯಗೊಳಿಸುವುದು ಅನಿವಾರ್ಯವೆನ್ನಲಾಗಿದೆ.

ಆದರೆ, ಪರೀಕ್ಷೆಯ ಫಲಿತಾಂಶವು ನಿಶ್ಚಿತ ದಿನಾಂಕ ಮೇ 12ರಂದೇ ಘೋಷಣೆಯಾಗುವ ನಿರೀಕ್ಷೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India News Today Live Updates: 'ದೇಶದ ಬಗ್ಗೆ ಕಾಳಜಿ ಇಲ್ಲದವರು ಆಡೋದನ್ನೇ ನಿಲ್ಲಿಸಬೇಕುʼ ಡ್ರೆಸ್ಸಿಂಗ್‌ ರೂಮ್‌ನಲ್ಲಿ ನೀರಿನ ಬಾಟಲಿ ಎಸೆದು ಸಚಿನ್‌ ಆಕ್ರೋಶ
Karnataka News Today Live: Ramayana - ರಾಮಾಯಣ ಸಿನಿಮಾ 4DX ನಲ್ಲಿ ನೋಡಬಹುದಾ? ಬೆಂಗಳೂರಿನಲ್ಲಿ ಥಿಯೇಟರ್‌ಗಳು ಎಲ್ಲಿವೆ? ಟಿಕೆಟ್ ಬೆಲೆ ಎಷ್ಟು?