ರಾಜ್ಯದಲ್ಲೆಡೆ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭ

Published : Mar 30, 2017, 04:34 PM ISTUpdated : Apr 11, 2018, 12:43 PM IST
ರಾಜ್ಯದಲ್ಲೆಡೆ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭ

ಸಾರಾಂಶ

ಇಂದಿನಿಂದ ಎಸ್.ಎಸ್.ಎಲ್.​ಸಿ ಪರೀಕ್ಷೆ ಆರಂಭಗೊಂಡಿದ್ದು 8.77 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕರ್ನಾಟಕ ಪರೀಕ್ಷಾ ಸುರಕ್ಷಾ ಪದ್ದತಿ ಅನ್ವಯ ಕಟ್ಟುನಿಟ್ಟಿನ ಭದ್ರತೆಯ ಅಡಿಯಲ್ಲಿ ಪರೀಕ್ಷೆ ಸರಾಗವಾಗಿ ನಡೆದಿದೆ.

ಬೆಂಗಳೂರು (ಮಾ.30): ಹೊಸ ಪದ್ದತಿಯೊಂದಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಇಂದಿನಿಂದ ಆರಂಭವಾಗಿದೆ. ಚಿಕ್ಕೋಡಿಯಲ್ಲಿ ವಿದ್ಯಾರ್ಥಿಗಳು ನಕಲು ಮಾಡಿದ ಪ್ರಕರಣ ಬಿಟ್ಟರೆ ರಾಜ್ಯದಲ್ಲಿ ಪರೀಕ್ಷೆ ಶಾಂತಿಯುತವಾಗಿ ಆರಂಭವಾಗಿದೆ.

ಆತಂಕದಿಂದ ಪ್ರವೇಶ ಪ್ರತಿ ನೋಡುತ್ತಿರುವ ವಿದ್ಯಾರ್ಥಿಗಳು ಒಂದೆಡೆಯಾದರೆ, ಚೆನ್ನಾಗಿ ಪರೀಕ್ಷೆ ಬರೆಯುವಂತೆ ಶುಭ ಹಾರೈಸುತ್ತಿರುವ ಪೋಷಕರ ದೃಶ್ಯ ಎಂದು ಎಲ್ಲಾ ಕಡೆ ಸಾಮಾನ್ಯವಾಗಿತ್ತು.

ಇಂದಿನಿಂದ ಎಸ್.ಎಸ್.ಎಲ್.​ಸಿ ಪರೀಕ್ಷೆ ಆರಂಭಗೊಂಡಿದ್ದು 8.77 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕರ್ನಾಟಕ ಪರೀಕ್ಷಾ ಸುರಕ್ಷಾ ಪದ್ದತಿ ಅನ್ವಯ ಕಟ್ಟುನಿಟ್ಟಿನ ಭದ್ರತೆಯ ಅಡಿಯಲ್ಲಿ ಪರೀಕ್ಷೆ ಸರಾಗವಾಗಿ ನಡೆದಿದೆ.

ಇದೇ ಮೊಟ್ಟ ಮೊದಲ ಬಾರಿಗೆ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಪ್ರತ್ಯೇಕವಾಗಿ ನೀಡಿದ್ದು ಯಾವುದೇ ಗೊಂದಲವಿಲ್ಲದೆ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ.

ಎಸ್ಎಸ್ಎಲ್​ಸಿ ಬೋರ್ಡ್ ನಿರ್ದೇಶಕಿ ಯಶೋಧಾ ಬೋಪಣ್ಣ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು..

ದ್ವಿತೀಯ ಪಿಯು ಪರೀಕ್ಷೆ ಈ ಬಾರಿ ಯಾವುದೇ ಗೊಂದಲವಿಲ್ಲದೆ ಮುಕ್ತಾಯವಾಗಿದೆ. ಇದೇ ಒತ್ತಡ ಎಸ್.ಎಸ್.ಎಲ್.​ಸಿ ಪರೀಕ್ಷೆಯ ಮೇಲೂ ಇದ್ದು ರಾಜ್ಯದ ಎಲ್ಲ ಜಿಲ್ಲಾ ಖಜಾನೆಗಳಿಗೆ ಸಿಸಿಟಿವಿ ಕಣ್ಗಾವಲು ಇಡಲಾಗಿದೆ. 24 ಗಂಟೆಯೂ ಎಸ್ಎಸ್ಎಲ್​ಸೀ ಬೋರ್ಡ್ ನಲ್ಲಿ ಮಾನಿಟರಿಂಗ್ ವ್ಯವಸ್ಥೆ ಮಾಡಲಾಗಿದ್ದು ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆದಿದ್ದಾರೆ. ಮೊದಲ ದಿನ 8 ಪ್ರಥಮ ಭಾಷೆಯ ಪರೀಕ್ಷೆ ನಡೆದಿದ್ದು ವಿದ್ಯಾರ್ಥಿಗಳು ಖುಷಿ ಖುಷಿಯಿಂದಲೇ ಪರೀಕ್ಷೆ ಬರೆದು ಹೊರಬಂದಿದ್ದಾರೆ.

ಇನ್ನು ಚಿಕ್ಕೋಡಿಯಲ್ಲಿ ವಿದ್ಯಾರ್ಥಿಗಳು ನಕಲು ಮಾಡಿರುವ ಬಗ್ಗೆ ವರದಿಯಾಗಿದೆ.ಇದರ ಹೊರತಾಗಿ ರಾಜ್ಯದಲ್ಲಿ ಪರೀಕ್ಷೆ ಸುಗಮಾವಾಗಿ ನಡೆದಿದ್ದು, ಏಪ್ರಿಲ್ 12ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜರುಗಲಿದೆ.

ವರದಿ: ಗಣೇಶ್ ಹೆಗಡೆ, ಬೆಂಗಳೂರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇರಳದಲ್ಲಿ ಉತ್ತರ ಭಾರತದ ಕಾರ್ಮಿಕನ ಮೇಲೆ ಗುಂಪು ಹತ್ಯೆ, 'ಆತನ ದೇಹದ ಮೇಲೆ ಗಾಯವಾಗದ ಪಾರ್ಟ್‌ಗಳೇ ಇಲ್ಲ' ಎಂದ ವೈದ್ಯರು!
ಅಂತರಾಷ್ಟ್ರೀಯ ವೇದಿಕೆಯಲ್ಲಿ ಕನ್ನಡದ ಡಿಂಡಿಮ: ವಿದೇಶಿ ಕಲಾಪ್ರೇಮಿಗಳ ಮನಗೆದ್ದ ಈ ಕನ್ನಡ ಕ್ಯಾಲಿಗ್ರಫಿ ಸಾಧಕ ಯಾರು?