
ಬೆಂಗಳೂರು(ಜು.14): ಜೂನ್‌ನಲ್ಲಿ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಶೇ.50.81 ಫಲಿತಾಂಶ ಹೊರಬಂದಿದೆ.
ಮಾರ್ಚ್-ಏಪ್ರಿಲ್‌ನಲ್ಲಿ ನಡೆದಿದ್ದ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದ ವಿದ್ಯಾರ್ಥಿಗಳ ಪೈಕಿ 2 ಲಕ್ಷ 42 ಸಾವಿರದ 951 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ, 1,23, 443 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದು ಕಳೆದ ವರ್ಷದ ಫಲಿತಾಂಶಕ್ಕಿಂತ ಶೇಕಡಾ25.93 ಹೆಚ್ಚಾಗಿದೆ. ಇದರಲ್ಲಿ, 73,865 ಬಾಲಕರು, 49,578 ವಿದ್ಯಾರ್ಥಿನಿಯರು ಈ ಮೂಲಕ ಪೂರಕ ಪರೀಕ್ಷೆಯಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಮರುಮೌಲ್ಯಮಾಪನಕ್ಕೆ ಜುಲೈ 27 ಕೊನೆ ದಿನವಾಗಿದ್ದು, 700 ಶುಲ್ಕ ಪಾವತಿಸಿ ಪೋಟೋ ಕಾಪಿ ಪಡೆಯಬಹುದಾಗಿದೆ.
ಇನ್ನು, ಇದೇ ವೇಳೆ ಮಾತನಾಡಿದ ಸಚಿವ ತನ್ವೀರ್ ಸೇಠ್, ಈ ವರ್ಷ 10 ಸಾವಿರ ಶಿಕ್ಷಕರನ್ನ ನೇಮಿಸಿಕೊಳ್ಳುವುದಕ್ಕೆ ಅನುಮೋದನೆ ಸಿಕ್ಕಿದೆ. ಇದರಲ್ಲಿ 5400 ಶಿಕ್ಷಕರನ್ನ ಹೈದ್ರಾಬಾದ್ ಕರ್ನಾಟಕಕ್ಕೆ ನೇಮಿಸಿಕೊಳ್ಳಲಾಗುವುದು. ಉಳಿದ 4600 ಹುದ್ದೆಗಳನ್ನು ರಾಜ್ಯದ ಇತರೆ ಜಿಲ್ಲೆಗಳಿಗೆ ಮೀಸಲಿಡಲಾಗುವುದು ಎಂದು ತಿಳಿಸಿದರು.
--
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.