ಡಿಎಂಕೆ ಮುಖಂಡ ಎಂ.ಕೆ. ಸ್ಟಾಲಿನ್ ಆಸ್ಪತ್ರೆಗೆ ದಾಖಲು

Published : Sep 27, 2018, 11:51 AM IST
ಡಿಎಂಕೆ ಮುಖಂಡ ಎಂ.ಕೆ. ಸ್ಟಾಲಿನ್ ಆಸ್ಪತ್ರೆಗೆ ದಾಖಲು

ಸಾರಾಂಶ

ಡಿಎಂಕೆ ಮುಖಂಡ ಎಂ.ಕೆ ಸ್ಟಾಲಿನ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಚೆನ್ನೈ : ಡಿಎಂಕೆ ಮುಖಂಡ  ಎಂ.ಕೆ. ಸ್ಟಾಲಿನ್ ಅವರನ್ನು ಆಸ್ಪತ್ರೆಗೆ  ದಾಖಲಿಸಿ. ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.  

 ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಿ, ಬಡಲತೊಡೆಯಲ್ಲಿ ಉಂಟಾದ ಗಡ್ಡೆಯನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆಯಲಾಗಿದೆ. 

ಸದ್ಯ ಅವರು ಸುಧಾರಿಸಿಕೊಳ್ಳುತ್ತಿದ್ದು ಗುರುವಾರ ಮಧ್ಯಾಹ್ನದ ವೇಳೆಗೆ ಆಸ್ಪತ್ರೆಯಿಂದ ಡಿಶ್ಚಾರ್ಜ್ ಮಾಡಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. 

ಸ್ಟಾಲಿನ್ ಅವರ ತಂದೆ ಕರುಣಾನಿಧಿ ನಿಧನದ ಬಳಿಕ ಡಿಎಂಕೆ ಅಧ್ಯಕ್ಷರಾಗಿ  ಆಯ್ಕೆಯಾಗಿದ್ದರು. ಕಳೆದ ಆಗಸ್ಟ್ 7ರಂದು ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India News Today Live Updates: ಅಂಧಭಕ್ತ, ಗೋದಿ ಮೀಡಿಯಾಗೆ ಪರ್ಯಾಯ ಪದ ಹುಡುಕಿದ ಶಶಿತರೂರ್!
Karnataka News Today Live: Ramayana - ರಾಮಾಯಣ ಸಿನಿಮಾ 4DX ನಲ್ಲಿ ನೋಡಬಹುದಾ? ಬೆಂಗಳೂರಿನಲ್ಲಿ ಥಿಯೇಟರ್‌ಗಳು ಎಲ್ಲಿವೆ? ಟಿಕೆಟ್ ಬೆಲೆ ಎಷ್ಟು?