ರಾಜ್ಯ ರಾಜಕಾರಣದ ಬಗ್ಗೆ ಹೊಸ ಬಾಂಬ್ ಸಿಡಿಸಿದ ರೇವಣ್ಣ

By Web DeskFirst Published Sep 22, 2018, 10:20 AM IST
Highlights

ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇದೀಗ ರಾಜ್ಯ ರಾಜಕಾರಣದ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಕೇಂದ್ರ ನಾಯಕರಿಂದ ರಾಜ್ಯ ಬಿಜೆಪಿ ನಾಯಕರು 300 ಕೋಟಿ ಕೇಳಿದ್ದಾರೆ ಎಂದು ಹೇಳಿದ್ದಾರೆ. 

ಹಾಸನ :  ಒಂದೆಡೆ ಬಿಜೆಪಿ ಮುಖಂಡರು ರಾಜ್ಯ ಸರ್ಕಾರವನ್ನು ಉರುಳಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ ಎಂಬ ಆರೋಪ ದಟ್ಟವಾಗುತ್ತಿರುವ ಸಂದರ್ಭ ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ, ಸಮ್ಮಿಶ್ರ ಸರ್ಕಾರ ಪತನಗೊಳಿಸಲು ರಾಜ್ಯ ಬಿಜೆಪಿ ನಾಯಕರು ಕೇಂದ್ರ ನಾಯಕರಿಂದ .300 ಕೋಟಿ ಹಣ ಕೇಳಿದ್ದಾರೆ ಎಂದು ಹೊಸ ಬಾಂಬ್‌ ಸಿಡಿಸಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬೀಳಿಸಲು ಬಿಜೆಪಿ ನಾಯಕರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಇದಕ್ಕಾಗಿ ಇದಕ್ಕಾಗಿ .300 ಕೋಟಿ ಹಣ ಕೇಳಿದ್ದಾರೆ ಎಂದು ತಿಳಿದುಬಂದಿದೆ. ಯಾರು ಏನೇ ಮಾಡಿದರೂ ರಾಜ್ಯ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಯಡಿಯೂರಪ್ಪ ಅವರ ಆಸೆ ಫಲಿಸದು ಎಂದರು.

ಬಿಜೆಪಿಯವರಿಗೆ ದೈವಾನುಗ್ರಹ ಇಲ್ಲ:

ರಾಜ್ಯದ ಬಿಜೆಪಿ ಮುಖಂಡರಿಗೆ ದೈವಾನುಗ್ರಹ ಇಲ್ಲ. ಆದ್ದರಿಂದ ಅವರಿಂದ ಸರ್ಕಾರ ಉರುಳಿಸಲು ಆಗದು ಎಂದರು. ಸಿಎಂ ಕುಮಾರಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಬಿಜೆಪಿ ನಾಯಕರ ನಡೆ ಕುರಿತ ಪ್ರಶ್ನೆಗೆ ಉತ್ತರಿಸಿದ ರೇವಣ್ಣ, ಅವರಿಗೆ ಮಾಡೋಕೆ ಕೆಲಸ ಇಲ್ಲ. ಕಳೆದ ಕೆಲ ತಿಂಗಳಿಂದ ಇದನ್ನೇ ಮಾಡುತ್ತಿದ್ದಾರೆ ಎಂದು ದೂರಿದರು.

click me!